ಉಲ್ಲಂಜೆ ಸರಕಾರಿ ಶಾಲೆ : ವಾರ್ಷಿಕೋತ್ಸವದ

ಕಿನ್ನಿಗೋಳಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ಶಾಲೆಗಳು ಮೌಲ್ಯಧಾರಿತ ಶಿಸ್ತು ಸಂಸ್ಕಾರದ ನೈತಿಕ ಶಿಕ್ಷಣ ನೀಡುವ ಅಗತ್ಯವಿದೆ ಎಂದು ಕಟೀಲು ದೇವಳದ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ ಹೇಳಿದರು.
ಸೋಮವಾರ ಉಲ್ಲಂಜೆ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರೋಜಿನಿ ಅಧ್ಯಕ್ಷತೆ ವಹಿಸಿದ್ದರು. ತೋಕೂರು ಐ. ಟಿ. ಐ ಪ್ರಿನ್ಸಿಪಾಲ್ ವೈ. ಎನ್. ಸಾಲ್ಯಾನ್ ದಿಕ್ಸೂಚಿ ಭಾಷಣಗೈದರು.
ಜಿ. ಪಂ. ಸದಸ್ಯ ಈಶ್ವರ್ ಕಟೀಲ್, ತಾ. ಪಂ. ಸದಸ್ಯೆ ಬೇಬಿ ಕೋಟ್ಯಾನ್, ಕ್ಲಸ್ಟರ್ ಅಧಿಕಾರಿ ಜಗದೀಶ ನಾವಡ, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಕುಂಜಿರಾಯ ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ , ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ದಿನೇಶ್ ಆಚಾರ್ಯ, ಆದರ್ಶ ಬಳಗದ ಅಧ್ಯಕ್ಷ ಜಿತೇಂದ್ರ ಶೆಟ್ಟಿ , ಯವಶಕ್ತಿ ಫ್ರೆಂಡ್ಸ್ ಅಧ್ಯಕ್ಷ ಶೈಲೇಶ್ ಅಂಚನ್ ಉಪಸ್ಥಿತರಿದ್ದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಯಾನಂದ ಶೆಟ್ಟಿ ಸ್ವಾಗತಿಸಿದರು. ಶಾಲಾಮುಖ್ಯ ಶಿಕ್ಷಕಿ ಮಂಗಳಾ ಎಸ್ ಭಟ್ ವರದಿ ವಾಚಿಸಿದರು.

Kinnigoli1011404

Comments

comments

Comments are closed.