ಮಕ್ಕಳ ಕಥಾ ಕವಿತಾ ತರಬೇತಿ ಗೋಷ್ಠಿ2014

ಕಿನ್ನಿಗೋಳಿ: ಸಾಹಿತ್ಯದ ಬಗ್ಗೆ ಚಿಕ್ಕ ವಯಸ್ಸಿನಲ್ಲಿಯೇ ಆಸಕ್ತಿ ಬೆಳೆಸಬೇಕು, ದೊಡ್ಡವರು ಆಸಕ್ತಿ ಬೆಳೆಸಿಕೊಂಡರೆ ಅದು ಮಕ್ಕಳಲ್ಲೂ ಬೆಳೆಯುತ್ತದೆ ಮಾತೃ ಭಾಷೆಯಲ್ಲಿ ಗುಣಮಟ್ಟದ ಶಿಕ್ಷಣ ಪಡೆದಾಗ ನಮ್ಮಲ್ಲಿರುವ ಸಹಜವಾದ ಪ್ರತಿಭೆ ಹೊರಬರಲು ಸಾಧ್ಯ ಎಂದು ಕಟೀಲು ದೇವಳ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಮಂಗಳೂರು ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಮಕ್ಕಳ ಕಥಾ ಕವಿತಾ ತರಬೇತಿ ಗೋಷ್ಠಿ ೨೦೧೪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಟೀಲು ದೇವಳ ಪದವಿ ಕಾಲೇಜು ಪ್ರಿನ್ಸಿಪಾಲ್ ಪ್ರೋ| ಎಂ. ಬಾಲಕೃಷ್ಣ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜು ಶಾಲಾ ನಾಯಕಿ ಅನುಜ್ಞಾ ಭಟ್ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ಸಾಹಿತಿ ಉಮೇಶ ರಾವ್ ಎಕ್ಕಾರು, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮ ಕಾರ್ಯದರ್ಶಿ ಬಿ. ಶ್ರೀನಿವಾಸ್ ರಾವ್, ಜತೆ ಕಾರ್ಯದರ್ಶಿ ಸಾವಿತ್ರಿ ಎಸ್. ರಾವ್, ಯುಗಪುರುಷ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ ಉಪಸ್ಥಿತರಿದ್ದರು.
ಕಟೀಲು ದೇವಳ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಪ್ರೋ| ಜಯರಾಮ ಪೂಂಜಾ ಸ್ವಾಗತಿಸಿ, ಪ್ರಸ್ತಾವನೆಗೈದರು. ಕಟೀಲು ಪ.ಪೂ.ಕಾಲೇಜು ಉಪನ್ಯಾಸಕಿ ವನಿತಾ ಜೋಷಿ ವಂದಿಸಿದರು. ಉಪನ್ಯಾಸಕ ಪುಂಡರೀಕ ಕಾರ್ಯಕ್ರಮ ನಿರೂಪಿಸಿದರು.

Kinnigoli 20011403

Comments

comments

Comments are closed.

Read previous post:
ಪಲ್ಸ್ ಪೋಲಿಯೋ ಅಭಿಯಾನ

ಮೂಲ್ಕಿ: ಮೂಲ್ಕಿ ರೋಟರಿ ಕ್ಲಬ್ ವತಿಯಿಂದ ಪಲ್ಸ್ ಪೋಲಿಯೋ ಅಭಿಯಾನದ ಉದ್ಗಾಟನೆ ಭಾನುವಾರ ಬೆಳಿಗ್ಗೆ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಕೃಷ್ಣ ನೆರವೇರಿಸಿದರು. ಈ ಸಂದರ್ಭ...

Close