ಪುನರೂರು ಉಚಿತ ಕಣ್ಣಿನ ತಪಾಸಣೆ, ಚಿಕಿತ್ಸೆ

ಕಿನ್ನಿಗೋಳಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನ, ಅಂಧರ ಸೇವಾ ಸಂಘ ದ. ಕ, ಮಂಗಳೂರು ಜಂಟೀ ಸಹಯೋಗದಲ್ಲಿ ಹಾಗೂ ಕರ್ಣಾಟಕ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ, ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಕಾರ್ಯಕ್ರಮ ಭಾನುವಾರ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಪಟೇಲ್ ವೆಂಕಟೇಶ್ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ಯುಗಪುರುಷದ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು. ಕರ್ಣಾಟಕ ಬ್ಯಾಂಕ್‌ನ ಬಿ. ಎನ್. ರಮೇಶ್, ಅಂಧರ ಸೇವಾ ಸಂಘದ ರವೀಂದ್ರ ರಾವ್, ಕಿನ್ನಿಗೋಳಿ ಗ್ರಾ. ಪಂ. ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಎಮ್. ವಿ. ಸುಬ್ರಹ್ಮಣ್ಯ, ರವಿ ಭಟ್, ಕೆ. ವಿ. ಸೀತಾರಾಮ್, ರವಿ ಶೆಟ್ಟಿ ಪುನರೂರು ಗುತ್ತು, ಡಾ| ಜಯರಾಮ ಶೆಟ್ಟಿ , ಡಾ| ಹೃಷಿಕೇಶ್ ಅಮೀನ್ ಉಪಸ್ಥಿತರಿದ್ದರು.
ಪಟೇಲ್ ವಾಸುದೇವ ರಾವ್ ಸ್ವಾಗತಿಸಿದರು. ಅಂಧರ ಸೇವಾ ಸಂಘದ ಅಧ್ಯಕ್ಷ ಪಿ. ಗುರುರಾಜ ರಾವ್ ಪ್ರಸ್ತಾವಿಸಿ ವಿಜಯಲಕ್ಷ್ಮೀ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli 27011418

Comments

comments

Comments are closed.

Read previous post:
ಕುಬೆವೂರು ಪೈಪ್ ಲೈನ್ ಗುದ್ದಲಿ ಪೂಜೆ

ಕಿನ್ನಿಗೋಳಿ: ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಬೆವೂರು, ಶಿವಗಿರಿ ಬಡಾವಣೆ, ಕೆಂಚನಕೆರೆ, ಕೆರೆಕಾಡು ಪರಿಸರದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರ 7.50 ಲಕ್ಷರೂ ವೆಚ್ಚದ ಕುಡಿಯುವ ನೀರಿನ ಯೋಜನೆಗೆ...

Close