ಏಳಿಂಜೆ ಪ್ರತಿಭಾ ಪುರಸ್ಕಾರ, ಸಮ್ಮಾನ

ಕಿನ್ನಿಗೋಳಿ:  ಶಿಸ್ತು ಸಹಜೀವನ, ಸಂಘಟನೆ, ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ವೈಯಕ್ತಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಅಭಿವೃದ್ಧಿಗೆ ನಾಂದಿಯಾಗುತ್ತದೆ ಎಂದು ಪೊಂಪೈ ಪದವಿ ಕಾಲೇಜು ಪ್ರಿನ್ಸಿಪಾಲ್ ಡಾ| ಕ್ಲಾರೆನ್ಸ್ ಮಿರಾಂದಾ ಹೇಳಿದರು.
ಬುಧವಾರ ಏಳಿಂಜೆ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ವಠಾರದಲ್ಲಿ ನಡೆದ ಏಳಿಂಜೆ ನವಚೇತನ ಯುವಕ ಮಂಡಲದ 27 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಏಳಿಂಜೆ ಕೋಂಜಾಲುಗುತ್ತು ದಿ| ಅಕ್ಕಿಸಂಕು ಶೆಟ್ಟಿ ಸ್ಮರಣಾರ್ಥ ಪರಿಸರದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಹಾಗೂ ಪ್ರಗತಿಪರ ಕೃಷಿಕ ಬಾಬು ಸುವರ್ಣ ಪಟ್ಟೆ ಹಾಗೂ ನಿವೃತ್ತ ಶಿಕ್ಷಕ ಮಂಜಪ್ಪ ಮೂಲ್ಯ ಅವರನ್ನು ಸನ್ಮಾನಿಸಲಾಯಿತು.
ಏಳಿಂಜೆ ದೇವಳದ ಆಡಳಿತ ಮೊಕ್ತೇಸರ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ನವಚೇತನ ಯುವಕ ಮಂಡಲದ ಗೌರವಾಧ್ಯಕ್ಷ ಅನಿಲ್ ಶೆಟ್ಟಿ ಏಳಿಂಜೆ ಕೋಂಜಾಲುಗುತ್ತು, ಅಧ್ಯಕ್ಷ ವೈ. ಕೃಷ್ಣ ಮೂಲ್ಯ ಉಪಸ್ಥಿತರಿದ್ದರು.
ನವಚೇತನ ಯುವಕ ಮಂಡಲದ ಮಾಜಿ ಅಧ್ಯಕ್ಷ ಲಕ್ಷ್ಮಣ್ ಬಿ. ಬಿ ಸ್ವಾಗತಿಸಿ ಕಾರ್ಯದರ್ಶಿ ಪ್ರಸಾದ್ ಕೋಟ್ಯಾನ್ ವಂದಿಸಿದರು. ಶರತ್ ಕಾರ್ಯಕ್ರಮ ನಿರೂಪಿಸಿದರು.

Elinje 13021408 Elinje 13021409

Comments

comments

Comments are closed.

Read previous post:
ಜೀವನದ ಯಶಸ್ವಿಗೆ ಮೌಲ್ಯಯುತ ಸಂಸ್ಕಾರ ಅಗತ್ಯ

ಕಿನ್ನಿಗೋಳಿ: ಮನುಷ್ಯ ತನ್ನ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕಾದರೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರವನ್ನು ಪೋಷಕರು ನೀಡಬೇಕು ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಡಾ| ಸೋಂದಾ...

Close