ಪರಿಶಿಷ್ಟ ಜಾತಿ ಪಂಗಡದವರಿಗೆ ಉಚಿತ ಸಸಿ ವಿತರಣೆ

ಕಿನ್ನಿಗೋಳಿ : ತೋಟಗಾರಿಕೆ ಇಲಾಖೆ ಗ್ರಾಮೀಣ ಪ್ರದೇಶದ ಜನರಿಗೆ ಹಲವಾರು ಯೋಜನೆಗಳನ್ನು ರೂಪಿಸಿದ್ಧು, ಇದರ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖಾ ಸಹಾಯಕ ನಿರ್ದೇಶಕ ಚನ್ನರಸೆಗೌಡ ಹೇಳಿದರು.
ತೋಟಗಾರಿಕಾ ಇಲಾಖೆಯ ಆಶ್ರಯದಲ್ಲಿ ಮಂಗಳವಾರ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕಿನ್ನಿಗೋಳಿ, ಮೆನ್ನಬೆಟ್ಟು , ಕೆಮ್ರಾಲ್ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ 450ಕ್ಕೂ ಮಿಕ್ಕಿ ವಿವಿಧ ಜಾತಿಯ ಹಣ್ಣಿನ ಗಿಡ ವಿತರಣೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕಿನ್ನಿಗೋಳಿ ಗ್ರಾ. ಪಂ. ಅಧ್ಯಕ್ಷೆ ಶ್ಯಾಮಲ ಪಿ. ಹೆಗ್ಡೆ , ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷ ಜನಾರ್ದನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ ಮತ್ತಿತರರು ಉಪಸ್ಥಿತರಿದ್ದರು.
ಕಿನ್ನಿಗೋಳಿ ಪಿಡಿಒ ಅರುಣ್ ಪ್ರದೀಪ್ ಡಿಸೋಜ ಸ್ವಾಗತಿಸಿದರು. ಕಾರ್ಯದರ್ಶಿ ಜೇಮ್ಸ್ ಓಲಿವರ್ ಡಿಸೋಜ ವಂದಿಸಿದರು.

Kinnigoli 25021402 Kinnigoli 25021403

Comments

comments

Comments are closed.

Read previous post:
ಲಕ್ಷ್ಮಣ್ ಸಫಲಿಗ

ಕಿನ್ನಿಗೋಳಿ : ಕಳೆದ ಸುಮಾರು 50ವರ್ಷಗಳಿಂದ ಕಿನ್ನಿಗೋಳಿಯಲ್ಲಿ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದ ಲಕ್ಷ್ಮಣ ಸಫಲಿಗ (80ವ.) ಸೋಮವಾರದಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಮೃತರಿಗೆ ಪತ್ನಿ ,...

Close