ಸ್ವಾಮಿ ವಿವೇಕಾನಂದ ಸಂಸ್ಥೆ ಉದ್ಘಾಟನೆ

Kinnigoli-09051402

ಕಿನ್ನಿಗೋಳಿ: ಮೇ 10 ಶನಿವಾರದಂದು ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಉದ್ಘಾಟನಾ ಸಮಾರಂಭ ಕಿನ್ನಿಗೋಳಿಯ ರಾಜಾಂಗಣ ಸಭಾಭವನದಲ್ಲಿ ನಡೆಯಲಿದ್ದು ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ಸಂಚಾಲಕ ಡಾ| ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಲಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಕಿನ್ನಿಗೋಳಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಲಿದ್ದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಆಳ್ವಾಸ್ ಎಜುಕೇಷನ್ ಫೌಂಡೇಶನ್ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಅವರನ್ನು ಸನ್ಮಾನಿಸಲಾಗುವುದು.
ಮಾಜಿ ಸಚಿವ ಅಮರನಾಥ ಶೆಟ್ಟಿ , ಮಾಜಿ ಶಾಸಕ ರುಕ್ಮಯ ಪೂಜಾರಿ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲ ಪ್ರಕಾಶ್ ಹೆಗ್ಡೆ ಭಾಗವಹಸಿಲಿದ್ದಾರೆ. ಸಂಸ್ಥೆಯು ಮುಂದಿನ ದಿನಗಳಲ್ಲಿ ಸಮಾಜಮುಖೀ ಸೇವಾ ಕಾರ್ಯಗಳು, ಶೈಕ್ಷಣಿಕ ಕಮ್ಮಟ, ಕಲೆ ಸಂಸ್ಕೃತಿ ಮೇಳಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಬಲೆ ತೆಲಿಪಾಲೆ ಖ್ಯಾತಿಯ ಕೆಂಚನಕೆರೆ ಕುಸಾಲ್ ತಂಡದಿಂದ ತೆಲಿಕೆದ ಗಮ್ಮತ್ತ್ ಹಾಸ್ಯಮಯ ಕಾರ್ಯಕ್ರಮ ನಡೆಯಲಿದೆ.
ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ಸಂಚಾಲಕರಾದ ನರಸಿಂಹ ಮಡಿವಾಳ್, ಸುರೇಖಾ ಶೆಟ್ಟಿ ಐಕಳ,ದಿನೇಶ್ ಮೂಲ್ಕಿ, ನವೀನ್ ಶೆಟ್ಟಿ ಕವತ್ತಾರ್, ಸಂತೋಷ್ ಮೂಲ್ಕಿ , ವಿಜಯ ಶೆಟ್ಟಿ, ಶರತ್ ಶೆಟ್ಟಿ ಉಪಸ್ಥಿತರಿದ್ದರು.

Comments

comments

Comments are closed.

Read previous post:
Kinnigoli-09051401
ಸುಸಂಸ್ಕೃತ ಸಮಾಜದ ನಿರ್ಮಾಣ ಆಗಬೇಕು

ಕಿನ್ನಿಗೋಳಿ: ಹೆತ್ತವರು ಪೋಷಕರು ಮಕ್ಕಳಿಗೆ ಮೌಲ್ಯಾಧರಿತ ಶಿಕ್ಷಣದೊಟ್ಟಿಗೆ ಮಾನಸಿಕ ಶಾಂತಿಯನ್ನೀಡುವ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಚಿಂತನೆಯ ಸಾರಗಳನ್ನು ತಿಳಿಹೇಳಿ ಸುಸಂಸ್ಕೃತ ಸಮಾಜದ ನಿರ್ಮಾಣದ ಕಾರ್ಯಕ್ಕೆ ಕೈಜೋಡಿಸಬೇಕಾಗಿದೆ. ಎಂದು ಶ್ರೀ...

Close