ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ

ಕಿನ್ನಿಗೋಳಿ : ಕೈಗಾರಿಕಾ ಯೋಜನೆಗಳ ಮುಖಾಂತರ ಸ್ವ ಉದ್ಯೋಗವನ್ನು ಪ್ರಾರಂಭಿಸಲು ಬೇಕಾಗುವ ಸಹಕಾರ ಸರಕಾರ ನೀಡುತ್ತಿದೆ. ಯುವಜನರು ಇದನ್ನು ಸದುಪಯೋಗಪಡಿಸಿ ಜೀವನದಲ್ಲಿ ಯಶಸ್ಸನ್ನು ಕಂಡುಕೊಳ್ಳಬಹುದು. ಎಂದು ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಇದರ ಜಿಲ್ಲಾ ಉಪನಿರ್ದೇಶಕ ಅರವಿಂದ ಬಾಳೇರಿ ಹೇಳಿದರು.
ಕರ್ನಾಟಕ ಸರಕಾರದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು, ಸಿಡಾಕ್ ಧಾರವಾಡ, ದಕ್ಷಿಣಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಮುಲ್ಕಿ ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆ ತೋಕೂರು ಇವುಗಳ ಜಂಟೀ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಒಂದುದಿನದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಮಕೃಷ್ಣ ಪೂಂಜಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ವೈ.ಎನ್ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಸತೀಶ್ ಮಾಬೇನ್ ಮತ್ತು ಕಿಶೋರ್ ಪೈ ಪೂರಕ ಮಾಹಿತಿ ನೀಡಿದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರಘುರಾಮ ರಾವ್ ವಂದಿಸಿ ಕಿರಿಯ ತರಬೇತಿ ಅಧಿಕಾರಿ ಲಕ್ಷ್ಮೀಕಾಂತ ಕಾರ್ಯಕ್ರಮ ನಿರೂಪಿಸಿದರು.

Kinnigoli-11061403

 

Comments

comments

Comments are closed.

Read previous post:
Kinnigoli-11061402
ಹರಿಹರ ಶ್ರೀ ರಾಮ ಭಜನಾ ಮಂದಿರ ಬ್ರಹ್ಮಕಲಶ

ಕಿನ್ನಿಗೋಳಿ : ಸಮಾಜದ ಬಗ್ಗೆ ಚಿಂತನೆ ಅಗತ್ಯ. ಭಜನೆಯಿಂದ ಏಕಾಗ್ರತೆ ಆತ್ಮಸ್ಥೈರ್ಯ ಹಾಗೂ ಮಾನಸಿಕ ಧೃಡತೆ ಶಾಂತಿಯನ್ನು ಕಂಡುಕೊಳ್ಳಬಹುದು. ಎಂದು ಯುವಜನಾ ಸೇವಾ ಮತ್ತು ಮೀನುಗಾರಿಕಾ ಸಚಿವ ಕೆ....

Close