ತೋಕೂರು : ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಕಿನ್ನಿಗೋಳಿ : ವಿದ್ಯಾರ್ಥಿ ಜೀವನದಲ್ಲಿ ಶಿಸ್ತು,ಪ್ರಾಮಾಣಿಕತೆ,ಹಿರಿಯರಿಗೆ ಗೌರವ ನೀಡುವುದು ಅಲ್ಲದೆ ಕಠಿನ ಪರಿಶ್ರಮದೊಂದಿಗೆ ತಾಂತ್ರಿಕ ಕ್ಷೇತ್ರದಲ್ಲಿ ಪರಿಣಿತಿ ಪಡೆದು ಶೃದ್ಧೆ ಮತ್ತು ಸಮರ್ಪಣಾಭಾವದಿಂದ ತಮ್ಮನ್ನು ತಾವು ತೊಡಗಿಸಿಕೊಂಡಲ್ಲಿ ಭವಿಷ್ಯದಲ್ಲಿ ಇನ್ನೊಬ್ಬರಿಗೆ ಮಾದರಿಯಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ವಿಜಯಾ ಕಾಲೇಜು ಪ್ರಾಂಶುಪಾಲ ಪ್ರೋ| ಕೆ.ಆರ್. ಶಂಕರ್ ಹೇಳಿದರು.
ನಿಟ್ಟೆ ವಿದ್ಯಾಸಂಸ್ಥೆಗೆ ಒಳಪಟ್ಟ ಮುಲ್ಕಿ ರಾಮಕೃಷ್ಣ ಪೂಂಜ ಐಟಿಐ ತೋಕೂರುವಿನಲ್ಲಿ 2013-2014 ನೇ ಸಾಲಿನ ವಿವಿಧ ದತ್ತಿನಿಧಿಗಳಿಂದ ಪ್ರಾಯೋಜಿಸಲ್ಪಟ್ಟ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ನಿಟ್ಟೆ ವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ||ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ಡಾ|| ಬಿ.ಹೆಚ್.ರಾಘವ ರಾವ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಅಧಿಕಾರಿ ಯೋಗೀಶ್ ಪೂಜಾರಿ ಉಪಸ್ಥಿತರಿದ್ದರು.
ಸಂಸ್ಥೆಯ ಪ್ರಾಚಾರ್ಯ ವೈ.ಎನ್.ಸಾಲ್ಯಾನ್ ಸ್ವಾಗತಿಸಿದರು. ತರಬೇತಿ ಅಧಿಕಾರಿ ರಘುರಾಮ ರಾವ್ ಪ್ರಸ್ತಾವನೆಗೈದರು. ಉಪನ್ಯಾಸಕ ದಯಾನಂದ ಲಾಗ್ವಾಣ್‌ಕರ್ ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಲಕ್ಷ್ಮೀಕಾಂತ ಕಾರ್ಯಕ್ರಮ ನಿರೂಪಿಸಿದರು.

Kinnigoli-16061402 Kinnigoli-16061403

 

Comments

comments

Comments are closed.

Read previous post:
Kinnigoli-16061401
ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಬೇಕು

ಕಿನ್ನಿಗೋಳಿ : ಪ್ರೀತಿ ವಿಶ್ವಾಸದ ಜೊತೆಗೆ ಸಮಾಜದ ಏಳಿಗೆಗಾಗಿ ಸೇವೆ ನಡೆಸುವ ಮೂಲಕ ಎಲ್ಲಾ ಜನರು ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದಾಗ ದೇಶದ ಉನ್ನತಿ ಸಾಧ್ಯ ಎಂದು ಪಡುಬಿದ್ರಿಯ ಎಂ.ಡಿ....

Close