ಕಿನ್ನಿಗೋಳಿ ರೋಟರಿ ಕ್ಲಬ್ ಪದಗ್ರಹಣ

ಕಿನ್ನಿಗೋಳಿ : ಜನರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿ ನಿರ್ದಿಷ್ಟ ಯೋಜನೆಗಳನ್ನು ರೂಪಿಸಿ ಉತ್ತಮ ಸೇವೆಗಳನ್ನು ತಲುಪಿಸಿದಾಗ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುವುದು ಎಂದು ರೋಟರಿ ಮಹಿಳಾ ಸಬಲೀಕರಣ ಜಿಲ್ಲಾ ಚಯರ್ ಮನ್ ಡಾ| ಗೌರಿ ಹೇಳಿದರು.
ಸೋಮವಾರ ಕಿನ್ನಿಗೋಳಿ ರಾಜಾಂಗಣದಲ್ಲಿ ನಡೆದ ಕಿನ್ನಿಗೋಳಿ ರೋಟರಿ ಸಂಸ್ಥೆಯ 2014-15ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ ವಿಲಿಯಂ ಸಿಕ್ವೇರಾ ಮತ್ತು ಕಾರ್ಯದರ್ಶಿ ಗಂಗಾಧರ ಶೆಟ್ಟಿ ತಂಡಕ್ಕೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು.
ರೋಟರಿ ವಲಯ 3ರ ಸಹಾಯಕ ಗವರ್ನರ್ ನಾಗೇಂದ್ರ, ಕೇಶವ ನಾಯ್ಕ್ ಸಂಪಾದಕತ್ವದ ಕಿನ್ನಿಗೋಳಿ ರೋಟರಿ ಮುಖವಾಣಿ “ಸಿಂಚನ” ವನ್ನು ಬಿಡುಗಡೆಗೊಳಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವಲಯ ಸೇನಾನಿ ಶರತ್ ಶೆಟ್ಟಿ ವೇದಿಕೆಯಲ್ಲಿದ್ದರು.
ನಿಕಟ ಪೂರ್ವ ಅಧ್ಯಕ್ಷ ರಾಬರ್ಟ್ ರೊಸಾರಿಯೊ ಸ್ವಾಗತಿಸಿ, ನಿಕಟ ಪೂರ್ವ ಕಾರ್ಯದರ್ಶಿ ಜೊಕಿಂ ಸಿಕ್ವೇರಾ ವಾರ್ಷಿಕ ವರದಿ ನೀಡಿದರು. ಪಿ. ಸತೀಶ್ ರಾವ್ ವಂದಿಸಿ, ಕಳ್ಳಿಗೆ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

KInnigoli-09071404 KInnigoli-09071405 KInnigoli-09071406

 

Comments

comments

Comments are closed.

Read previous post:
Mulki-09071401
ಲಾರಿ ಪಲ್ಟಿ

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬಳಿ ನವ ಮಂಗಳೂರು ಬಂದರಿಗೆ ಹಾರು ಬೂದಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Close