ಕಾರ್ ಸ್ಕಿಡ್ ಆಗಿ ಗೋಡೆಗೆ ಡಿಕ್ಕಿ

ಮೂಲ್ಕಿ: ಚಾಲಕನ ನಿಯಂತ್ರಣ ಕಳೆದುಕೊಂಡ ಸ್ವಿಪ್ಟ್ ಕಾರ್ ಸ್ಕಿಡ್ ಆಗಿ ರಸ್ತೆ ಬದಿಯ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಕೊಲ್ನಾಡು ಜಂಕ್ಷನ್ ಸಮೀಪ ಶುಕ್ರವಾರ ಮುಂಜಾನೆ 6 ಗಂಟೆಗೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರು ಚಾಲಕ ಮಂಗಳೂರು ರೈಲ್ವೇ ನಿಲ್ದಾಣದಿಂದ ಪ್ರಯಾಣಿಕರನ್ನು ಪಿಕಪ್ ಮಾಡಿಕೊಂಡು ಉಡುಪಿ ಕಡೆ ಹೋಗುತ್ತಿದ್ದಾಗ ಕೊಲ್ನಾಡ್ ಸಮೀಪ ಘಟನೆ ಸಂಭವಿಸಿದೆ. ಈ ವೇಳೆ ಜೋರಾಗಿ ಮಳೆ ಸುರಿಯುತ್ತಿದ್ದು ಚಾಲಕ ವಾಹನವನ್ನು ಓವರ್ ಟೇಕ್ ಮಾಡಲು ಯತ್ನಿಸಿ ರಸ್ತೆ ಬಿಟ್ಟು ಕೆಳಕ್ಕಿಳಿದಿರಬೇಕೆಂದು ಶಂಕಿಸಲಾಗಿದೆ. ಸುರತ್ಕಲ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನನ್ನು ಸ್ಥಳೀಯರು ಕೂಡಲೇ ಕಾರಿನಿಂದ ಹೊರಕ್ಕೆಳೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Comments

comments

Comments are closed.

Read previous post:
Kinnigoli-01081406
ಚಿಂತನಾ ಶೀಲತೆ ಬೆಳೆಸಿಕೊಳ್ಳಬೇಕು

 ಕಟೀಲು : ವಿದ್ಯಾರ್ಥಿಗಳು ಚಿಂತನಾಶೀಲತೆ ಬೆಳೆಸಿಕೊಂಡಲ್ಲಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಭವ್ಯ ಸಮಾಜವನ್ನು ಕಟ್ಟಿಕೊಳ್ಳಬಹುದು ಎಂದು ಕಟೀಲು ದೇವಳ ಪ್ರಧಾನ ಅರ್ಚಕ ವಾಸುದೇವ ಆಸ್ರಣ್ಣ ಹೇಳಿದರು. ಗುರುವಾರ ಕಟೀಲು...

Close