ಭ್ರಾಮರೀ ಮಹಿಳಾ ಸಮಾಜ : ಆಟಿಡೊಂಜಿ ದಿನ

ಕಿನ್ನಿಗೋಳಿ: ಮಹಿಳೆಯರು ವೈಜ್ಞಾನಿಕ ರೀತಿಯ ಹಳೆಯ ಆಚರಣೆಗಳನ್ನು ಉಳಿಸಿ ಬೆಳೆಸಿ ಮುಂದಿನ ಯುವ ಪೀಳಿಗೆಗೆ ತಿಳಿ ಹೇಳುವ ಕಾರ್ಯ ಮಾಡಬೇಕಾಗಿದೆ. ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡುಗೋಡು ಸೇವಾಪ್ರತಿನಿಧಿ ಶುಭಲತಾ ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಭಾನುವಾರ ಭ್ರಾಮರೀ ಮಹಿಳಾ ಸಮಾಜ ಮೆನ್ನಬೆಟ್ಟು ಆಯೋಜಿಸಿದ ಆಟಿದ ಕೂಟ ಕಾರ್ಯಕ್ರಮದಲ್ಲಿ ಆಟಿ ತಿಂಗಳ ಮಹತ್ವದ ಬಗ್ಗೆ ಮಾತಾಡಿದರು.
ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಕೊಡೆತ್ತೂರಿನ ಪ್ರಗತಿಪರ ಕೃಷಿಕೆ ಲಕ್ಷ್ಮೀ ಮೂಲ್ಯ ಅವರನ್ನು ಸನ್ಮಾನಿಸಲಾಯಿತು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಕಿಲೆಂಜೂರು, ಮಾಜಿ ಅಧ್ಯಕ್ಷೆ ಸಾವಿತ್ರಿ ಶೆಟ್ಟಿ, ಉಪಾಧ್ಯಕ್ಷೆ ಸರೋಜಿನಿ, ಭ್ರಾಮರೀ ಮಹಿಳಾ ಸಮಾಜ ಅಧ್ಯಕ್ಷೆ ರೇವತಿ ಪುರುಷೋತ್ತಮ್ ಉಪಸ್ಥಿತರಿದ್ದರು.
ಅನುಷಾ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.

Kinnigoli-11081401 Kinnigoli-11081402 Kinnigoli-11081403

Comments

comments

Comments are closed.

Read previous post:
ಕಿನ್ನಿಗೋಳಿ ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ

ಕಿನ್ನಿಗೋಳಿ: ಯುಗಪುರುಷ ವಲಯದ ಶ್ರೀ ಮದ್ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಆಗಸ್ಟ್ 11, 12 ಹಾಗೂ 13ರಂದು ಜರಗಲಿದೆ. ಪ್ರತಿದಿನ ಪ್ರಾತಃಕಾಲ,...

Close