ಸದ್ಭಾವನಾ ದಿನಾಚರಣೆ

ಮೂಲ್ಕಿ: ಯುವ ಜನತೆ ಸಂಘಟಿತರಾಗಿದ್ದರೆ ದೇಶದಲ್ಲಿ ಶಾಂತಿ ಸೌಹರ್ದ ಹೆಚ್ಚಲು ಸಾದ್ಯವಿದೆ ಎಂದು ಮೂಲ್ಕಿ ನಗರ ಪಂಚಾಯತಿ ಮುಖ್ಯಾಧಿಕಾರಿ ವಾಣಿ ಆಳ್ವಾ ಹೇಳಿದರು.
ಮೂಲ್ಕಿ ವಿಜಯಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಘಟಕ, ನವದುರ್ಗಾಯುವಕ ವೃಂದ ಕೋಟೆಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸದ್ಭಾವನಾ ದಿನಾಚರಣೆ ಹಾಗೂ ಮಲೇರಿಯಾ ನಿರ್ಮೂಲನಾ ಜಾಗ್ರತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ವಿದ್ಯಾರ್ಥಿಗಳಿಗೆ ಸದ್ಭಾವನಾ ಪ್ರತಿಜ್ಞೆ ಭೋದಿಸಿದರು.
ಈ ಸಂದರ್ಭ ಮಂಗಳೂರು ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜಿನ ಆಶ್ರಯದಲ್ಲಿ ನಡೆದ ಜಲೇರಿಯಾ ನಿಮೂಲನಾ ಜಾಗ್ರತಿಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ.ರೇಷ್ಮಾ ಮಾಹಿತಿ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪದವಿ ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಆರ್.ಶಂಕರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಡಾ.ಎಂ.ಎ.ಆರ್.ಕುಡ್ವಾ, ನವದುರ್ಗಾ ಯುವಕ ವೃಂದದ ಕಾರ್ಯದರ್ಶಿ ಸದಾನಂದ ಅಂಚನ್, ಮೂಲ್ಕಿ ಪಟ್ಟಣ ಪಂಚಾಯತಿ ಸದಸ್ಯ ಹರ್ಷರಾಜ ಶೆಟ್ಟಿ ಜಿಎಂ, ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಬಿಇ ಸಂಪತ್ ಕುಮಾರ್ ಉಪಸ್ಥಿತರಿದ್ದರು. ಎನ್‌ಎಸ್‌ಎಸ್ ಕಾರ್ಯದರ್ಶಿ ವಿಜೇತಾ ಕಾಮತ್ ಸ್ವಾಗತಿಸಿದರು. ರೆಡ್‌ಕ್ರಾಸ್ ಕಾರ್ಯದರ್ಶಿ ದೀಕ್ಷಾ ವಂದಿಸಿದರು. ಸ್ವಾತಿಲಕ್ಷ್ಮಿ ನಿರೂಪಿಸಿದರು.

Kinnigoli-2308-201404Bhagyavan Sanil

Comments

comments

Comments are closed.

Read previous post:
Kinnigoli-2308-201403
ಶ್ರೀ ಕೃಷ್ಣ ಜನ್ಮಾಷ್ಟಮಿ – ಸ್ಪರ್ದೆಗಳ ಸಮಾರೋಪ

ಮೂಲ್ಕಿ: ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರದ ತಿಳುವಳಿಕೆಯ ಜೊತೆಗೆ ನಾಯಕತ್ವದ ಗುಣಗಳನ್ನು ಗಳಿಸಲು ಸ್ಪರ್ದೆಗಳು ಬಹು ಸಹಕಾರಿಯಾಗಿದೆ ಎಂದು ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸಹಾಯಕ ಮಹಾ ಪ್ರಭಂದಕ ಕೆ...

Close