ಪಡುಪಣಂಬೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ವಿದ್ಯಾರ್ಥಿಗಳು ಸಾಮರಸ್ಯತೆ, ಶಿಸ್ತು, ಸಂಸ್ಕೃತಿ ಹಾಗೂ ಸಂಸ್ಕಾರಗಳಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನೈಜ ಪ್ರತಿಭೆಯನ್ನು ಪ್ರದರ್ಶಿಸಿದಾಗ ಸಾಧನೆಯ ಮೆಟ್ಟಿಲುಗಳನ್ನು ಏರಬಹುದು. ಎಂದು ಪಕ್ಷಿಕೆರೆ ಸಂತ ಜೂದರ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕ ಫಾ. ಆಂಡ್ರ್ಯೂ ಲಿಯೋ ಡಿಸೋಜ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಉತ್ತರ ವಲಯ, ಹಾಗೂ ಪಕ್ಷಿಕೆರೆ ಸಂತ ಜೂದರ ಹಿರಿಯ ಪ್ರಾಥಮಿಕ ಪಕ್ಷಿಕರೆ ಆಶ್ರಯದಲ್ಲಿ ಪಡುಪಣಂಬೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಫ್ರೌಢ ಶಾಲಾ ಸಹ ಶಿಕ್ಷಕ ಉತ್ತರವಲಯದ ಸಂಘದ ಸಂಘಟನಾ ಕಾರ್ಯದರ್ಶಿ ಸುಧಾಕರ ಪೊಸ್ರಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಕಳೆದ ಎಸ್.ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಸರಕಾರಿ ಶಾಲಾ ಮಟ್ಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆದ ಕೆಮ್ರಾಲ್ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಗೀತಾ ನಿಶಾ ಪಿರೇರಾ ಅವರನ್ನು ಪುರಸ್ಕರಿಸಲಾಯಿತು
ಈ ಸಂದರ್ಭ ಪಡುಪಣಂಬೂರು ಕ್ಲಸ್ಟರ್ ಸಿಆರ್‌ಪಿ ರಾಮದಾಸ್ ಭಟ್, ನಿವೃತ್ತ ಶಿಕ್ಷಕಿ ಪುಷ್ಪಾ, ಪಕ್ಷಿಕೆರೆ ಸಂತ ಜೂದರ ಹಿ. ಪಾ. ಶಾಲಾ ಮುಖ್ಯ ಶಿಕ್ಷಕಿ ಉಪಸ್ಥಿತರಿದ್ದರು.

Kinnigoli-13091401 Kinnigoli-13091402 Kinnigoli-13091403

Comments

comments

Comments are closed.

Read previous post:
Kinnigoli-13091402
ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ

ಮುಲ್ಕಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಪ್ರೊ ಬಿ ಕ್ರಷ್ಣಪ್ಪ ಸ್ತಾಪಿತ) ಮುಲ್ಕಿ ಹೋಬಳಿ ಶಾಖೆಯ ಸಂಚಾಲಕರಾಗಿ ಸುರೇಶ್ ಕೆರೆಕಾಡು ಆಯ್ಕೆಯಾಗಿದ್ದಾರೆ. ಸಮಿತಿಯ ರಾಜ್ಯ ವಿಭಾಗೀಯ ಸಂಚಾಲಕ ಶೇಖರ್...

Close