ಮೆನ್ನಬೆಟ್ಟು ವಿಶೇಷ ಮಹಿಳಾ ಗ್ರಾಮ ಸಭೆ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಟ್ಟ ಮೆನ್ನಬೆಟ್ಟು, ಕೊಂಡೆಮೂಲ ಕಿಲೆಂಜೂರು, ನಡುಗೋಡು ಗ್ರಾಮಗಳ 2014-15ನೇ ಸಾಲಿನ ಮಹಿಳಾ ವಿಶೇಷ ಗ್ರಾಮ ಸಭೆ ಮಂಗಳವಾರ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಎಮ್. ಬಾಲಕೃಷ್ಣ ಶೆಟ್ಟಿ ಮಹಿಳಾ ಸಬಲೀಕರಣದ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್. ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು, ಉಪಾಧ್ಯಕ್ಷೆ ಸರೋಜಿನಿ, ಮಾಜಿ ಅಧ್ಯಕ್ಷೆ ಶೈಲಾ ಶೆಟ್ಟಿ, ಪಿಡಿಒ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-16091418

 

Comments

comments

Comments are closed.

Read previous post:
Kinnigoli-16091419
ಸನಿಲ್ ರವರು ನಮಗೆಲ್ಲರಿಗೂ ಮಾದರಿ

ಮುಲ್ಕಿ: ಸನಿಲ್ ರವರ ಜೀವನವು ನಮಗೆಲ್ಲರಿಗೂ ಮಾದರಿಯಾಗಿದ್ದು, ತನ್ನ ಜೀವಿತಾವಧಿಯಲ್ಲಿ ಅನುಸರಿಸಿದ ತತ್ವ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಮಾಜಿ ಸಚಿವರಾದ ಕೆ. ಅಮರನಾಥ ಶೆಟ್ಟಿ ಯವರು ನುಡಿದರು....

Close