ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವರಿಗೆ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿ

ಮುಲ್ಕಿ : ಮೂಲ್ಕಿ ಸುಂದರರಾಮ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಮೂಲ್ಕಿ ಬಂಟರ ಸಂಘ ಪ್ರತೀ ವರ್ಷ ನೀಡುತ್ತಿರುವ ಮೂಲ್ಕಿ ಸುಂದರರಾಮ ಶೆಟ್ಟಿ ಪ್ರಶಸ್ತಿಗೆ ಈ ವರ್ಷ ಖ್ಯಾತ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವರನ್ನು ಆರಿಸಲಾಗಿದೆ.ನವೆಂಬರ್ 9 ರಂದು ಸಂಜೆ 2.30ಕ್ಕೆ ಮೂಲ್ಕಿ ಕಾರ್ನಾಡುವಿನ ಗಾಂಧಿ ಮೈದಾನದ ಬಳಿಯಿರುವ ಮೂಲ್ಕಿ ಬಂಟರ ಸಂಘದ ಸಭಾಭವನದಲ್ಲಿ ನಡೆಯುವ ಸಂಘದ ವಾರ್ಷಿಕ ವಿದ್ಯಾರ್ಥಿ ವೇತನ,ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಹಿರಿಯರಾದ ಏರ್ಯರಿಗೆ ನೀಡಿ ಗೌರವಿಸಲಾಗುವುದೆಂದು ಮೂಲ್ಕಿ ಬಂಟರ ಸಂಘದ ಕಾರ್ಯದರ್ಶಿ ರವಿರಾಜ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸಂಘದ ಆಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆಯವರ ಆಧ್ಯಕ್ಷತೆಯಲ್ಲಿ ಬೆಂಗಳೂರಿನ ಉದ್ಯಮಿ ಬಪ್ಪನಾಡು ನಾರಾಯಣ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಮಂಡ್ಯದ ಉದ್ಯಮಿ ಕಿನ್ನಿಗೋಳಿಯ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್‌ನ ಆಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿಯವರ ಉಪಸ್ಥಿತಿಯಲ್ಲಿ ಬಂಟ ಸಮಾಜದ ಸಾಧಕರಾದ ಉದ್ಯಮ ಕ್ಷೇತ್ರದ ಸಾಧಕ ಸಾಯಿರಾಧಾ ಗ್ರೂಪ್‌ನ ಆಡಳಿತ ನಿರ್ದೇಶಕ ಮನೋಹರ ಶೆಟ್ಟಿ,ಬೆಳಪುವಿನ ಸಮಾಜ ಸೇವಕ ಐಕಳ ಭಾವ ದೇವಿಪ್ರಸಾದ್ ಶೆಟ್ಟಿ, ದೇಶ ಸೇವೆಗಾಗಿ ನಿವೃತ್ತ ಬ್ರಿಗೇಡಿಯರ್ ಐ.ಎನ್.ರೈ ,ಸರಕಾರಿ ಆಡಳಿತ ಸೇವೆಗಾಗಿ ಮೂಲ್ಕಿ ನಗರ ಪಂಚಾಯತ್‌ನ ಮುಖ್ಯಾಧಿಕಾರಿ ವಾಣಿ ಆಳ್ವರನ್ನು ಗೌರವಿಸಲಾಗುವುದೆಂದು ರವಿರಾಜ ಶೆಟ್ಟಿ ತಿಳಿಸಿದ್ದಾರೆ.

Mulki-05111401

Comments

comments

Comments are closed.

Read previous post:
Kinnigoli-04111405
ಅಜ್ ಅಮಿ ಕೊಂಕ್ಣಿ ಉಲವ್ಯಾಂ ಕಾರ್ಯಾಗಾರ

ಕಿನ್ನಿಗೋಳಿ: ಮಾತೃ ಭಾಷೆ ಕೊಂಕಣಿಯ ಸಾಹಿತ್ಯ, ಜಾನಪದ, ಸಂಸ್ಕೃತಿ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ಚಿಂತನೆ ಮಾಡಬೇಕಾಗಿದೆ. ಇಂತಹ ಕಾರ್ಯಾಗಾರಗಳು ಸಮಾಜದ ಎಲ್ಲಾ ಕೇಂದ್ರಗಳಲ್ಲಿ ನಡೆಯಬೇಕು ಎಂದು ಬಳ್ಕುಂಜೆ...

Close