ಪ್ರತಿಭಾ ಕಾರಂಜಿ ಭ್ರಮರ 2014 ಸಮಾರೋಪ

ಕಿನ್ನಿಗೋಳಿ: ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡಾ ಭಾಗವಹಿಸಿದಾಗ ಭೌದ್ಧಿಕ ಮತ್ತು ಮಾನಸಿಕವಾಗಿ ವಿಕಸನಗೊಳ್ಳುತ್ತಾರೆ ಎಂದು ಕಟೀಲು ಶಿಕ್ಷಣ ಸಂಸ್ಥೆಗಳ ಸಂಚಾಲಕ ವೆ.ಮೂ. ವಾಸುದೇವ ಆಸ್ರಣ್ಣ ಹೇಳಿದರು.
ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಕಾರಿಯವರ ಕಛೇರಿ, ಮಂಗಳೂರು ತಾಲೂಕು ಉತ್ತರ ವಲಯ ಆಶ್ರಯದಲ್ಲಿ ಗುರುವಾರ ಕಟೀಲು ದೇವಳ ಪದವಿ ಪೂರ್ವ ಕಾಲೇಜಿನ ಸಭಾಭವನದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಭ್ರಮರ-2014 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಕಟೀಲು ದೇವಳ ಅರ್ಚಕರಾದ ವೆ. ಮೂ. ಅನಂತ ಪದ್ಮನಾಭ ಆಸ್ರಣ್ಣ, ವೆ.ಮೂ. ಶ್ರೀಹರಿನಾರಾಯಣದಾಸ ಆಸ್ರಣ್ಣ ಶುಭಾಶಂಸನೆಗೈದರು.
ಮೆನ್ನಬೆಟ್ಟು ಗ್ರಾ. ಪಂ.ಅಧ್ಯಕ್ಷ ಜನಾರ್ದನ ಕಿಲೆಂಜೂರು ಅಧ್ಯಕ್ಷತೆ ವಹಿಸಿದ್ದರು ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಜಯರಾಮ ಪೂಂಜ, ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಕಾರಿ ಲೋಕೇಶ್ ಸಿ, ಕಟೀಲು ಶಾಲಾ ಸುವರ್ಣ ಮಹೋತ್ಸವ ಸಮಿತಿ ಕಾರ್ಯಧ್ಯಕ್ಷ ಮಧುಕರ ಅಮೀನ್, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ , ಬೆಂಗಳೂರು ಸಮಿತಿ ಅಧ್ಯಕ್ಷ ಪ್ರಭಾಕರ ರಾವ್, ಕ್ಷೇತ್ರ ಸಮನ್ವಯಕಾರಿ ಪೀತಾಂಬರ ಕೆ., ತಾಲೂಕು ದೈಹಿಕ ಶಿಕ್ಷಣಾಕಾರಿ ರಘುನಾಥ್, ಶಿಕ್ಷಣ ಇಲಾಖೆಯ ಪ್ರವೀಣ್ ಕುಟಿನ್ಹೊ, ರಾಧಾಕೃಷ್ಣ, ಕಟೀಲು ದೇವಳ ಪ್ರೌಢ ಶಾಲಾ ವೈಸ್ ಪ್ರಿನ್ಸಿಪಾಲ್ ಕೆ. ವಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕ ಶ್ರೀವತ್ಸ ಹಾಗೂ ಸಾಯಿನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-07111402

Comments

comments

Comments are closed.

Read previous post:
Kinnigoli-07111401
ಕಿನ್ನಿಗೋಳಿ ಪಂಚಾಯಿತಿಗೆ ಭೇಟಿ

ಕಿನ್ನಿಗೋಳಿ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೋಲು ಹೋಬಳಿಯ ೭ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಕುಡಿಯುವ ನೀರಿನ ಯೋಜನೆ ಹಾಗೂ...

Close