ಐಕಳ ವಿಶೇಷ ಗ್ರಾಮ ಸಭೆ

ಕಿನ್ನಿಗೋಳಿ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಹೊಸ ಯೋಜನೆಗಳನ್ನು ರೂಪಿಸುತ್ತಿದೆ. ಗ್ರಾಮಸ್ಥರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ನೋಡೆಲ್ ಅಧಿಕಾರಿ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾದ ಸಿ.ಕೆ.ಶ್ಯಾಮಲ ಹೇಳಿದರು.

ಮಂಗಳವಾರ ಐಕಳ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದರು.
ಐಕಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಿನಿ ವಸಂತ್ ಅಧ್ಯಕ್ಷತೆ ವಹಿಸಿದ್ದರು.
ಐಕಳ ಪಂಚಾಯಿತಿ ಉಪಾಧ್ಯಕ್ಷ ದಿವಾಕರ ಚೌಟ, ಪಿಡಿಒ ನಾಗರತ್ನ ಜಿ., ಸಹಾಯಕ ತಾಲೂಕು ಪಂಚಾಯಿತಿ ಸಂಯೋಜಕ ಹರೀಶ್, ತಾಂತ್ರಿಕ ಸಹಾಯಕ ಸುದರ್ಶನ್, ಉಪಸ್ಥಿತರಿದ್ದರು.
ಗ್ರಾಮ ಸಂಪನ್ಮೂಲ ವ್ಯಕ್ತಿ ಕಿಶೋರ್ ಪೈ ಹಾಗೂ ಪದ್ಮ ಪ್ರಭಾಕರ್ ಲೆಕ್ಕಪರಿಶೋಧನೆ ವರದಿ ಮಂಡಿಸಿದರು. ಪ್ರಕಾಶ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

Kinnigoli-19111406

Comments

comments

Comments are closed.

Read previous post:
Kinnigoli-19111405
ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ಚರ್ಚ್‌

ಕಿನ್ನಿಗೋಳಿ: ಕಿನ್ನಿಗೋಳಿ ಕೊಸೆಸಾಂವ್ ಅಮ್ಮನವರ ಚರ್ಚ್‌ನ ವಾರ್ಷಿಕ ಹಬ್ಬದ ಪ್ರಯುಕ್ತ ಮಂಗಳವಾರ ಮೆರವಣಿಗೆ ಹಾಗೂ ಬಲಿಪೂಜೆ ನಡೆಯಿತು.

Close