ಮಹಿಳೆಯರು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಬೇಕು

ಕಿನ್ನಿಗೋಳಿ : ಸಶಕ್ತ ಮಹಿಳೆಯರು ದೇಶದ ಅಭಿವೃದ್ಧಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ಮಹಿಳೆಗೆ ಗೌರವದ ಸ್ಥಾನಮಾನ ದೊರೆಯಲು ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಬೇಕು ಎಂದು ಕಿನ್ನಿಗೋಳಿ ಚರ್ಚ್ ಧರ್ಮಗುರು ಫಾ. ವಿನ್ಸೆಂಟ್ ಮೊಂತೆರೊ ಹೇಳಿದರು.
ಭಾನುವಾರ ಸಂಜೀವಿನಿ ಮತ್ತು ಕನ್ಸೆಟ್ಟಾ ಆಸ್ಪತ್ರೆಯ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ವಿಶ್ವ ಕ್ಷಯ ರೋಗ ದಿನಾಚರಣೆ 2015 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೌಟುಂಬಿಕ ಮೌಲ್ಯಗಳು ಮತ್ತು ಕ್ಷಯ ರೋಗದ ಮಾಹಿತಿ ಬಗ್ಗೆ ಹಳೆಯಂಗಡಿ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಗ್ರೆಟ್ಟಾ ಡಿಸೋಜ ಮತ್ತು ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಭಾಸ್ಕರ ಕೋಟ್ಯಾನ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.
ಈ ಸಂದರ್ಭ ಸಂಜೀವಿನಿ ಸಂಸ್ಥೆಯ ಸ್ವಸಹಾಯ ಸಂಘಗಳ ಒಕ್ಕೂಟ ಘಟಕದ ನೂತನ ಪಧಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಕಿನ್ನಿಗೋಳಿ ಕನ್ಸೆಟ್ಟಾ ಆಸ್ಪತ್ರೆ ನಿರ್ದೇಶಕಿ ಡಾ. ಸಿಸ್ಟರ್ ಜೀವಿತಾ, ಮೇರಿವೆಲ್ ಕಾನ್ವೆಂಟಿನ ಮುಖ್ಯಸ್ಥೆ ಭಗಿನಿ ವಿತಾಲಿಸ್ ಬಿ.ಎಸ್., ಕಿಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದ ವಸಂತ್, ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇವತಿ ಶೆಟ್ಟಿಗಾರ್, ಹಳೆಯಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮ ಮಧು, ಐಕಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಿನಿ ವಸಂತ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು ಉಪಸ್ಥಿತರಿದ್ದರು.
ಸಂಜೀವಿನಿ ಸಂಚಾಲಕಿ ಸಿಸ್ಟರ್ ಹೋಪ್ ಸ್ವಾಗತಿಸಿ ಪ್ರಸ್ತಾವನೆಗೈದರು. ಲಲಿತಾ ಭಾಸ್ಕರ್ ಮತ್ತು ದಿನೇಶ್ ಅಮೀನ್ ವರದಿ ವಾಚಿಸಿದರು. ಸಿಸ್ಟರ್ ಪ್ಲೊಸ್ಸಿ ವಂದಿಸಿದರು. ಆಶಾ ಕಾರ್ಯಕ್ರಮ ನಿರೂಪಿಸಿದರು.

Kinnigoli-10031508 Kinnigoli-10031509

Comments

comments

Comments are closed.

Read previous post:
Kinnigoli-10031506
ಸ್ವಂಯಚಾಲಿತ ದಾರಿದೀಪ ಉದ್ಘಾಟನೆ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಲೆಂಜೂರು ಗ್ರಾಮದಲ್ಲಿ ನೂತನವಾಗಿ ಅಳವಡಿಸಲಾದ ಸ್ವಂಯಚಾಲಿತ ದಾರಿದೀಪಗಳನ್ನು ಪ್ರಗತಿಪರ ಹಿರಿಯ ಕೃಷಿಕ ಪದ್ಮನಾಭ ಮಾಡ ಕಿಲೆಂಜೂರು ಉದ್ಘಾಟಿಸಿದರು. ಗ್ರಾಮಾಂತರ ಮಟ್ಟದಲ್ಲಿ...

Close