ಸಕಾರಾತ್ಮಕ ಗುಣಾತ್ಮಕ ಚಿಂತನೆಗಳನ್ನು ರೂಪಿಸಬೇಕು

ಕಿನ್ನಿಗೋಳಿ : ಸಕಾರಾತ್ಮಕ ಗುಣಾತ್ಮಕ ಚಿಂತನೆ ಯೋಚನೆ ಯೋಜನೆಗಳನ್ನು ತಮ್ಮ ಜೀವನದಲ್ಲಿ ರೂಪಿಸಿದಾಗ ಸಂಸಾರ ಮತ್ತು ಸಮಾಜ ಅಭಿವೃದ್ಧಿ ಹೊಂದುತ್ತದೆ ಎಂದು ಕಟೀಲು ದೇವಳ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಭಾರತಿ ಶೆಟ್ಟಿ ಹೇಳಿದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಹಾಗೂ ಭ್ರಾಮರಿ ಮಹಿಳಾ ಸಮಾಜ ಆಶ್ರಯದಲ್ಲಿ ನಡೆದ ಮಹಿಳಾ ದಿನಾಚರಣೆ ಸಂದರ್ಭ ಉಪನ್ಯಾಸ ನೀಡಿ ಮಾತನಾಡಿದರು.
ಈ ಸಂದರ್ಭ ಭ್ರಾಮರಿ ಮಹಿಳಾ ಸಮಾಜದ ಸ್ಥಾಪಕ ಅಧ್ಯಕ್ಷೆ ಸುನಂದ ಜಯಂತ ಕರ್ಕೇರ ಅವರನ್ನು ಸನ್ಮಾನಿಸಲಾಯಿತು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ಧನ ಕಿಲೆಂಜೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್, ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರೋಜಿನಿ ಸುಧಾಕರ್, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಭ್ರಾಮರಿ ಮಹಿಳಾ ಸಮಾಜದ ಗೌರವಾಧ್ಯಕ್ಷೆ ಸಾವಿತ್ರಿ ಎಸ್. ಶೆಟ್ಟಿ, ಅಧ್ಯಕ್ಷೆ ರೇವತಿ ಪುರುಷೋತ್ತಮ್ ಉಪಸ್ಥಿತರಿದ್ದರು.
ಮೆನ್ನಬೆಟ್ಟು ಪಂಚಾಯಿತಿ ಪಿಡಿಒ ಪ್ರಕಾಶ್ ಬಿ ಸ್ವಾಗತಿಸಿದರು. ಅನುಷಾ ಕರ್ಕೆರಾ ಕಾರ್ಯಕ್ರಮ ನಿರೂಪಿಸಿದರು.

Kinnigoli-16031509

Comments

comments

Comments are closed.

Read previous post:
Kinnigoli-16031508
ಮಹಿಳೆಯರು ಆರ್ಥಿಕವಾಗಿ ಸದೃಡರಾಗಬೇಕಾಗಿದೆ

ಕಿನ್ನಿಗೋಳಿ : ನಮ್ಮ ಮಕ್ಕಳಿಗೆ ಶಿಸ್ತು ಸಂಸ್ಕಾರ ನೈತಿಕತೆಯ ಪಾಠ ಹಾಗೂ ಸತ್ಪ್ರಜೆಯನ್ನಾಗಿ ಮಾಡಲು ಮಹಿಳೆಯರು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸದೃಡರಾಗಬೇಕಾಗಿದೆ. ಎಂದು ಆಕಾಶವಾಣಿ ಕಾರ್ಯಕ್ರಮ ನಿರೂಪಕಿ ಮಲ್ಲಿಕಾ...

Close