ವಿಜಯಾ ಕಾಲೇಜು ಶಿಕ್ಷಕ ರಕ್ಷಕ ಸಂಘ ಸಭೆ

ಮೂಲ್ಕಿ: ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಯಲ್ಲಿ ಪೋಷಕರ ಪಾತ್ರವೂ ಬಹಳ ಮುಖ್ಯವಾಗಿದ್ದು ವಿದ್ಯಾರ್ಥಿಗಳ ಅದ್ಯಯನಕ್ಕೆ ಪೂರಕ ಅವಕಾಶ ಹಾಗೂ ಅವರ ಬಗ್ಗೆ ಸೂಕ್ತ ತಿಳುವಳಿಕೆ ಮೂಡಿಸಿಕೊಂಡು ಅವರ ಶೈಕ್ಷಣಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ವಿಜಯಾ ಕಾಲೇಜು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಕೀಲ ವಿ.ಸತೀಶ ಕಾಮತ್ ಹೇಳಿದರು.
ಮೂಲ್ಕಿ ವಿಜಯಾ ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆಯಲ್ಲಿ ಪೋಷಕರಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಎಂ.ಎ.ಆರ್ ಕುಡ್ವಾ ವಹಿಸಿದ್ದರು.
ಪದವಿ ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಆರ್.ಶಂಕರ್, ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ನಾರಾಯಣ ಉಪಸ್ಥಿತರಿದ್ದರು.

Bhagyavan Sanil

Mulki-0504201501

Comments

comments

Comments are closed.