ಪಠ್ಯೇತರ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು

ಮೂಲ್ಕಿ: ಯುವವಾಹಿನಿ ಸಂಸ್ಥೆಯು ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶದಂತೆ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಯುವವಾಹಿನಿ ಕೇಂದ್ರ ಸಮಿತಿ  ಅಧ್ಯಕ್ಷ ಪ್ರೇಮನಾಥ್ ಕೆ ಹೇಳಿದರು.
ಮೂಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಜರಗಿದ ಯುವವಾಹಿನಿ ಮೂಲ್ಕಿ ಘಟಕ 2015-16 ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮೂಲ್ಕಿ ಯುವ ವಾಹಿನಿ ಘಟಕದ 2015-16 ರ ಸಾಲಿನ ನೂತನ ಅಧ್ಯಕ್ಷ ಸತೀಶ್ ಕುಮಾರ್ ಮತ್ತವರ ತಂಡದ ಪದಗ್ರಹಣ ನೆರವೇರಿಸಿ ಮಾತನಾಡಿದರು.

ಮೂಲ್ಕಿ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಮೂಲ್ಕಿ  ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಿ ಸಾಲ್ಯಾನ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿಕಟಪೂರ್ವಾಧ್ಯಕ್ಷ ಮೋಹನ್ ಸುವರ್ಣ, ಕಾರ್ಯದರ್ಶಿ ರಕ್ಷಿತಾ ಯೋಗೀಶ್ ಕೋಟ್ಯಾನ್, ನೂತನ ಕಾರ್ಯದರ್ಶಿ ಭಾಸ್ಕರ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೋಹನ್ ಸುವರ್ಣ ಸ್ವಾಗತಿಸಿದರು, ಭಾಸ್ಕರ ಕೋಟ್ಯಾನ್ ವಂದಿಸಿದರು. ನರೇಂದ್ರ ಕೆರೆಕಾಡು ಮತ್ತು ಉದಯ ಅಮೀನ್ ನಿರೂಪಿಸಿದರು.

Prakash Suvarna

Mulkii-16061502 Mulkii-16061503

Comments

comments

Comments are closed.

Read previous post:
Kinnigoli-16061501
ಪಾವಂಜೆ ಕೃಷಿ ಜನಪದೋತ್ಸವ

ಪಾವಂಜೆ: ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದಲ್ಲಿ ಜೂ.20 ಶನಿವಾರ ಮತ್ತು ಜೂ. 21  ಭಾನುವಾರದಂದು ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ರಿಲೀಜಿಯಸ್ ಟ್ರಸ್ಟ್‌ನ ಸಂಯೋಜನೆಯಲ್ಲಿ ತುಳುನಾಡ ಕೃಷಿ ಜನಪದೋತ್ಸವ...

Close