ರಾಮಕೃಷ್ಣ ಪೂಂಜ ವಿದ್ಯಾರ್ಥಿ ವೇತನ

ಕಿನ್ನಿಗೋಳಿ: ವಿದ್ಯಾರ್ಥಿಗಳು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಕೌಶಲ್ಯಭರಿತ ಪರಿಣತಿ ಪಡೆದು ಶೃದ್ಧೆ ಮತ್ತು ಸಮರ್ಪಣಾಭಾವದಿಂದ ತಮ್ಮನ್ನು ತಾವು ತೊಡಗಿಸಿಕೊಂಡಲ್ಲಿ ಭವಿಷ್ಯದಲ್ಲಿ ಇನ್ನೊಬ್ಬರಿಗೆ ಮಾದರಿಯಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎಸ್. ರಮಾನಂದ ಶೆಟ್ಟಿ ಹೇಳಿದರು.
ನಿಟ್ಟೆ ವಿದ್ಯಾಸಂಸ್ಥೆಗೆ ಒಳಪಟ್ಟ ಮುಲ್ಕಿ ರಾಮಕೃಷ್ಣ ಪೂಂಜ ಐಟಿಐ ನಲ್ಲಿ 2014-15ನೇ ಸಾಲಿನ ವಿವಿಧ ದತ್ತಿನಿಧಿಗಳಿಂದ ಪ್ರಾಯೋಜಿಸಲ್ಪಟ್ಟ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯ ವೈ.ಎನ್.ಸಾಲ್ಯಾನ್ ವಹಿಸಿದ್ದರು. ಈ ಸಂದರ್ಭ ಡಾ. ಬಿ.ಹೆಚ್.ರಾಘವ ರಾವ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧಿಕಾರಿ ಯೋಗೀಶ್ ಪೂಜಾರಿ, ಪೂಂಜ ದತ್ತಿನಿಧಿಯ ವಿಶ್ವಸ್ಥ , ಉದ್ಯಮಿ ಎಮ್. ಎಚ್. ಅರವಿಂದ ಪೂಂಜಾ ಉಪಸ್ಥಿತರಿದ್ದರು.
ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ವಿಶ್ವನಾಥ್ ರಾವ್ ಸ್ವಾಗತಿಸಿದರು. ತರಬೇತಿ ಅಧಿಕಾರಿ ರಘುರಾಮ ರಾವ್ ಪ್ರಸ್ತಾವನೆಗೈದರು. ಹಿರಿಯ ಅಧ್ಯಾಪಕ ದಯಾನಂದ ಲಾಗ್ವಾಣ್‌ಕರ್ ಧನ್ಯವಾದ ಸಲ್ಲಿಸಿದರು. ಕಿರಿಯ ತರಬೇತಿ ಅಧಿಕಾರಿ ಲಕ್ಷ್ಮೀಕಾಂತ ಕಾರ್ಯಕ್ರಮ ನಿರೂಪಿಸಿದರು.

Kinnigoli-18071503

Comments

comments

Comments are closed.

Read previous post:
Kinnigoli-18071502
ಆದರ್ಶ ಬಳಗ ಪದಾಧಿಕಾರಿ ಆಯ್ಕೆ

ಕಿನ್ನಿಗೋಳಿ: ಆದರ್ಶ ಬಳಗ ಕೊಡೆತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಸಂಘದ ಮಹಾಸಭೆಯಲ್ಲಿ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ದಾಮೋದರ ಶೆಟ್ಟಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ಕರ್ಕೇರ, ಕಾರ್ಯದರ್ಶಿ...

Close