ಕಿನ್ನಿಗೋಳಿ ರೋಟರ‍್ಯಾಕ್ಟ್ ಪದಗ್ರಹಣ

ಕಿನ್ನಿಗೋಳಿ: ಯುವಕರು ಸೇವಾ ಸಂಘ ಸಂಸ್ಥೆಗಳೊಂದಿಗೆ ತಮ್ಮನ್ನು ತೊಡಗಿಸಿಕೊಂಡು, ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಸ್ತ ನೀಡಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರಿನ ಹಿಲ್ಡಾ ರಾಯಪ್ಪನ್ ಹೇಳಿದರು.
ಶನಿವಾರ ಕಿನ್ನಿಗೋಳಿ ರೋಟರಿ ರಜತ ಭವನದಲ್ಲಿ ನಡೆದ ಕಿನ್ನಿಗೋಳಿ ರೋಟರಿ ಪ್ರವರ್ತಿತ ರೋಟರಾಕ್ಟ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
ಪದಗ್ರಹಣ ಅಧಿಕಾರಿಯಾಗಿ ಕಿನ್ನಿಗೋಳಿ ರೋಟರಿ ಅಧ್ಯಕ್ಷ ಎಂ. ಬಾಲಕೃಷ್ಣ ಶೆಟ್ಟಿ ನೂತನ ಅಧ್ಯಕ್ಷ ಜಾಕ್ಸನ್ , ಕಾರ್ಯದರ್ಶಿ ವಿಜೇತ್ ಸಿಕ್ವೇರಾ ಹಾಗೂ ಪದಾಧಿಕಾರಿಗಳಿಗೆ ಪದವಿ ಪ್ರದಾನ ಮಾಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪರಿಸರದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ, ಹಾಗೂ ಹಿಲ್ಡಾ ರಾಯಪ್ಪನ್, ಬ್ರದರ್ ಜೊಸೆಫ್ ಮತ್ತು ಕಿನ್ನಿಗೋಳಿ ನಿಕಟ ಪೂರ್ವ ಅಧ್ಯಕ್ಷ ವಿಲಿಯಂ ಸಿಕ್ವೇರಾ ಅವರನ್ನು ಸನ್ಮಾನಿಸಲಾಯಿತು.
20 ಮಂದಿಯನ್ನು ನೂತನ ಸದಸ್ಯರಾಗಿ ಸೇರ್ಪಡೆಗೊಳಿಸಲಾಯಿತು. ರೋಟರ‍್ಯಾಕ್ಟ್ ಜಿಲ್ಲಾ ಪ್ರತಿನಿಧಿ ಮಹಾದೇವ ಸ್ವಾಮಿ, ಯುಗಪುರುಷದ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಕೆನರಾ ವಲಯ ಪ್ರತಿನಿಧಿ ಭಗೀಶ್, ಮಾಜಿ ಸಭಾಪತಿ ಸಂತೋಷ್‌ಕುಮಾರ್, ನೂತನ ಸಭಾಪತಿ ಯಶವಂತ ಐಕಳ ಉಪಸ್ಥಿತರಿದ್ದರು.
ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಸ್ವಾಗತಿಸಿದರು, ಮಾಜಿ ಕಾರ್ಯದರ್ಶಿ ಸುಧಾಕರ ಪೊಸ್ರಾಲ್ ವಾರ್ಷಿಕ ವರದಿ ವಾಚಿಸಿದರು. ನೂತನ ಕಾರ್ಯದರ್ಶಿ ವಿಜೇತ್ ಸಿಕ್ವೇರಾ ವಂದಿಸಿದರು ಪ್ರಕಾಶ್ ಆಚಾರ್ಯ ಮತ್ತು ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-28071507 Kinnigoli-28071508

Kinnigoli-28071506

Comments

comments

Comments are closed.

Read previous post:
Kinnigoli-28071503
ಕೆಂಚನಕೆರೆ ಕೋಳಿ ಸಾಗಾಟದ ಜೀಪು ಪಲ್ಟಿ

ಕಿನ್ನಿಗೋಳಿ: ಮೂಲ್ಕಿ - ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಂಚನಕೆರೆ ಶಾಲೆಯ ಬಳಿ ಕೋಳಿ ಸಾಗಾಟದ ಜೀಪೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ...

Close