ಮೌಲ್ಯಾಧಾರಿತ ಶಿಕ್ಷಣ ಕನ್ನಡ ಮಾಧ್ಯಮದಲ್ಲಿದೆ

ಕಿನ್ನಿಗೋಳಿ: ನೈತಿಕ, ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ಕನ್ನಡ ಮಾಧ್ಯಮದಲ್ಲಿದೆ. ಕನ್ನಡ ಮಾಧ್ಯಮದ ಬಗ್ಗೆ ಪೋಷಕರು ಕೀಳರಿಮೆ ಭಾವನೆ ಬೆಳೆಸಿಕೊಳ್ಳದೆ ಮಕ್ಕಳಿಗೆ ಪಠ್ಯ ಹಾಗೂ ಪಾಠ್ಯೇತರ ಚಟುವಟಿಕೆಗಳಲ್ಲಿ ಪ್ರೋತ್ಸಾಹ ನೀಡಬೇಕು. ಎಂದು ಭಗಿನಿ ಅನ್ನಿ ಮರಿಯಾ ಹೇಳಿದರು.
ಬಳಕುಂಜೆ ಸಂತ ಪೌಲರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಕ್ಷಕ ಸಂಘದ ಮಹಾಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಈ ಸಂದರ್ಭ ಶಾಲಾ ಸಂಚಾಲಕ ಫಾ. ಮೈಕಲ್ ಡಿಸಿಲ್ವ, ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಹಿಲ್ಡಾ ಡಿಸೋಜ, ಶಿಕ್ಷಕರಾದ ಸುಕುಮಾರ್, ಹೆಲೆನ್ ಡಿಸೋಜ, ತಾರ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉದಯರಾವ್, ದಿನಕರಶೆಟ್ಟಿ ಉಪಸ್ಥಿತರಿದ್ದರು.

Kinnigoli 03081501

Comments

comments

Comments are closed.

Read previous post:
Kinnigoli-01081502
ಬಾಲಕಾರ್ಮಿಕ ವಿದ್ಯಾರ್ಥಿಗಳಿಂದ ಜಾಗೃತಿ

ಮೂಲ್ಕಿ: ಸಾಮಾಜಿಕ ಪಿಡುಗಾಗಿರುವ ಬಾಲಕಾರ್ಮಿಕರ ನಿಷೇಧದ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿ ಚಿತ್ರಗಳನ್ನು ಸ್ವತಹ ಬಿಡಿಸಿ ಅದನ್ನು ಸರ್ಕಾರಿ ಶಿಕ್ಷಣ ಸಂಸ್ಥೆ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗೆ ನೀಡುವ...

Close