ಸದವಕಾಶವಿದ್ದಾಗ ಭವಿಷ್ಯ ಉತ್ತಮ

ಕಿನ್ನಿಗೋಳಿ: ಮಕ್ಕಳಲ್ಲಿ ಎಳವೆಯಲ್ಲಿಯೇ ಚಟುವಟಿಕೆಗಳಲ್ಲಿ ತೊಡಗಿಸಿ ಪ್ರೋತ್ಸಾಹ ಸದವಕಾಶ ನೀಡಿದಾಗ ಭವಿಷ್ಯದಲ್ಲಿ ಉತ್ತಮ ಸಾಧನೆಗೈಯಬಲ್ಲರು ಎಂದು ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ ಹೇಳಿದರು.
ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್ ನೇತೃತ್ವದಲ್ಲಿ ಯುಗಪುರುಷ ಕಿನ್ನಿಗೋಳಿ, ರೋಟರಿ ಕ್ಲಬ್, ಯಕ್ಷಲಹರಿ ಕಿನ್ನಿಗೋಳಿ, ಸೌತ್ ಕೆನರಾ ಫೋಟೊಗ್ರಾಫರ‍್ಸ್ ಅಸೋಸಿಯೇಶನ್ (ರಿ.) ಮೂಲ್ಕಿ ವಲಯ, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಕಿನ್ನಿಗೋಳಿ, ಭ್ರಾಮರಿ ಮಹಿಳಾ ಸಮಾಜ ಮೆನ್ನಬೆಟ್ಟು ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆದ ಮುದ್ದುಕೃಷ್ಣ ಸ್ಪರ್ಧೆ ಉದ್ಘಾಟಸಿ ಮಾತನಾಡಿದರು.
ಕಿನ್ನಿಗೋಳಿ ರೋಟರಿ ಕ್ಲಬ್ ಕಾರ್ಯದರ್ಶಿ ಜೆರಾಲ್ಡ್ ಮಿನೇಜಸ್, ರೋಟರ‍್ಯಾಕ್ಟ್ ಮಾಜಿ ಜಿಲ್ಲಾ ಪ್ರತಿನಿ ಸುಮಿತ್ ಕುಮಾರ್, ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ಜಾಕ್ಸನ್ ಸಲ್ಡಾನ, ರೋಟರ‍್ಯಾಕ್ಟ್ ಸಭಾಪತಿ ಯಶವಂತ ಐಕಳ, ಕಾರ್ಯದರ್ಶಿ ವಿಜೇತ್ ಸಿಕ್ವೇರಾ, ಇನ್ನರ್‌ವೀಲ್ ಕ್ಲಬ್ ಕಾರ್ಯದರ್ಶಿ ವಿಮಲ ತ್ಯಾಗರಾಜ್, ಸೌತ್ ಕೆನರಾ ಪೋಟೋಗ್ರಾಫರ‍್ಸ್ ಅಸೋಸಿಯೇಶನ್ ಮುಲ್ಕಿ ವಲಯ ಅಧ್ಯಕ್ಷ ನವೀನ್‌ಕುಮಾರ್ ಕಟೀಲ್, ಕಿನ್ನಿಗೋಳಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಅಧ್ಯಕ್ಷ ದಿನೇಶ್ ಆಚಾರ್ಯ, ಉದ್ಯಮಿ ಪ್ರಥ್ವಿರಾಜ್ ಆಚಾರ್ಯ, ಮೆನ್ನಬೆಟ್ಟು ಭ್ರಾಮರಿ ಮಹಿಳಾ ಸಮಾಜ ಅಧ್ಯಕ್ಷೆ ರೇವತಿ ಪುರುಷೋತ್ತಮ್, ಶರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Mulki-0509201501 Mulki-0509201502 Mulki-0509201503 Mulki-0509201504 Mulki-0509201505 Mulki-0509201506 Mulki-0509201507 Mulki-0509201508 Mulki-0509201509

Comments

comments

Comments are closed.

Read previous post:
Kinnigoli-05091501
ಚಂದ್ರಹಾಸ ಕೋಟ್ಯಾನ್ ಅಧ್ಯಕ್ಷರಾಗಿ ಆಯ್ಕೆ

 ಕಿನ್ನಿಗೋಳಿ : ಕರ್ನಾಟಕ ಸ್ಟೇಟ್ ಟೈಲರ‍್ಸ್ ಎಸೋಸಿಯೇಶನ್ (ರಿ) ಕಿನ್ನಿಗೋಳಿ ವಲಯದ ೨೦೧೫-೧೬ರ ಸಾಲಿನ ಅಧ್ಯಕ್ಷರಾಗಿ ಚಂದ್ರಹಾಸ ಕೋಟ್ಯಾನ್ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಶಂಂಕರ ಬಿ.ಕೋಟ್ಯಾನ್, ಉಪಾಧ್ಯಕ್ಷರುಗಳಾಗಿ ಹರೀಶ್ ಜಿ...

Close