ಬೃಹತ್ ಗ್ರಾಮ ಸ್ವಚ್ಛತಾ ಅಭಿಯಾನ

ಕಿನ್ನಿಗೋಳಿ: ಸ್ವಚ್ಚತೆ ಮತ್ತು ಮಾಲಿನ್ಯ ಮುಕ್ತ ಪರಿಸರವೇ ಆರೋಗ್ಯಭರಿತ ನೆಮ್ಮದಿಯ ಜೀವನ ಎಂದು ದಾಮಸ್‌ಕಟ್ಟೆ ಕಿರೆಂ ಚರ್ಚ್ ಧರ್ಮಗುರು ಫಾ. ವಿಕ್ಟರ್ ಡಿಮೆಲ್ಲೋ ಹೇಳಿದರು.
ರಾಷ್ಟ್ರೀಯ ಸೇವಾ ಯೋಜನೆ ಪೊಂಪೈ ಕಾಲೇಜು ಐಕಳ, ಎನ್.ಸಿ.ಸಿ. ಘಟಕ ಯುತ್ ರೆಡ್ ಕ್ರಾಸ್ ಮತ್ತು ರಿಬ್ಬನ್ ಕ್ಲಬ್, ಯುಗಪುರುಷ, ರೋಟರ‍್ಯಾಕ್ಟ್ ಕ್ಲಬ್ ಕಿನ್ನಿಗೋಳಿ, ರಿಕ್ಷಾ-ಚಾಲಕ ಮಾಲಕರ ಸಂಘ, ಇನ್ನರ್‌ವೀಲ್ ಕ್ಲಬ್, ಲಯನ್ಸ್ ಕ್ಲಬ್ ಮತ್ತು ರೋಟರಿ ಕ್ಲಬ್ ಕಿನ್ನಿಗೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಬೃಹತ್ ಗ್ರಾಮ ಸ್ವಚ್ಛತಾ ಅಭಿಯಾನವನ್ನು ಕಿನ್ನಿಗೋಳಿಯಲ್ಲಿ ಉದ್ಘಾಟಿಸಿ ಮಾತನಾಡಿದರು.
ಐಕಳ ಪೊಂಪೈ ಕಾಲೇಜಿನ ವಿದ್ಯಾರ್ಥಿಗಳು ಕಿನ್ನಿಗೋಳಿಯಿಂದ ಮೂರುಕಾವೇರಿ ವರೆಗಿನ ರಸ್ತೆಯ ಇಕ್ಕೆಲಗಳಲ್ಲಿರುವ ಕಸಕಡ್ಡಿಗಳು ಹಾಗೂ ಪ್ಲಾಸ್ಟಿಕ್ ವಸ್ತುಗಳನ್ನು ತೆಗೆದು ಸ್ಚಚ್ಚಗೊಳಿಸಿದರು.
ಐಕಳ ಪೊಂಪೈ ಕಾಲೇಜು ಪ್ರಾಂಶುಪಾಲ ಡಾ. ಜೋನ್ ಕ್ಲಾರೆನ್ಸ್ ಮಿರಾಂದ ಕಿನ್ನಿಗೋಳಿ ಯುಗಪುರುಷ ಪ್ರಧಾನ ಸಂಪಾದಕ ಭುವನಾಭಿರಾಮ ಉಡುಪ, ಪೊಂಪೈ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾನಾಧಿಕಾರಿ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್ ಗುಜರನ್, ಕಿನ್ನಿಗೋಳಿ ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ಜಾಕ್ಸನ್ ಪಕ್ಷಿಕೆರೆ, ಕಾರ್ಯದರ್ಶಿ ವಿಜೇತ ಸಿಕ್ವೇರಾ, ಕಿನ್ನಿಗೋಳಿ ಇನ್ನರ್‌ವೀಲ್ ಅಧ್ಯಕ್ಷೆ ಪ್ರೀತಿ ಶೆಟ್ಟಿ, ಕಾರ್ಯದರ್ಶಿ ವಿಮಲ ತ್ಯಾಗರಾಜ್, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ್ ಶೆಟ್ಟಿ, ಪೊಂಪೈ ಕಾಲೇಜು ಉಪನ್ಯಾಸಕ ಪ್ರೊ. ಯೋಗಿಂದ್ರ ಬಿ., ಕಿನ್ನಿಗೋಳಿ ರಿಕ್ಷಾ-ಚಾಲಕ ಮಾಲಕರ ಸಂಘ ಅಧ್ಯಕ್ಷ ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-08101503

Comments

comments

Comments are closed.

Read previous post:
Kinnigoli-08101502
ಕ್ರೀಡಾಂಗಣದಲ್ಲಿ ರಾಜಕೀಯ ಬೇಡ

ಕಿನ್ನಿಗೋಳಿ: ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಯುವಜನರ ಹಿತ ಕಾಪಾಡಬೇಕಾದ ಕ್ರೀಡಾ ಸಚಿವರೇ ಕ್ರೀಡಾಂಗಣದ ವಿಷಯದಲ್ಲಿ ಅಡ್ಡಿ ಪಡಿಸುವ ಮೂಲಕ ಸಚಿವ ಕೆ.ಅಭಯಚಂದ್ರ ಜೈನ್ ಸರಕಾರದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿದ್ದಾರೆ...

Close