ಸುಸಂಸ್ಕೃತ ಸಮಾಜದ ನಿರ್ಮಾಣ

ಕಿನ್ನಿಗೋಳಿ: ಶಾಂತಿ, ಸೌಹಾರ್ಧ್ಯತೆ, ಸಹೃದಯತೆಯ ಜೀವನವೇ ಸುಸಂಸ್ಕೃತ ಸಮಾಜದ ನಿರ್ಮಾಣಕ್ಕೆ ಪ್ರೇರಣೆಯಾಗಬಲ್ಲುದು ಎಂದು ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.
ಕಿನ್ನಿಗೋಳಿ ಸಮೀಪದ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಮ್ಮಾಯಿ ದೇವಳದಲ್ಲಿ ಬುಧವಾರ ನಡೆದ ಶರನ್ನವರಾತ್ರಿ ಉತ್ಸವದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭ ನಿವೃತ್ತ ಪ್ರಿನ್ಸಿಪಾಲ್ ವೆಂಕಟರಮಣ ಭಟ್, ಧಾರ್ಮಿಕ ಕಾರ್ಯಕರ್ತೆ ವಿದ್ಯಾ ಗೌರಿ ಹಾಗೂ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ಅವರನ್ನು ಸಾಧಕರ ನೆಲೆಯಲ್ಲಿ ಸನ್ಮಾನಿಸಲಾಯಿತು.
ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ದೇವಸ್ಥಾನದ ಕಾರ್ಯಾಧ್ಯಕ್ಷ ಉಳೆಪಾಡಿ ನಾರಾಯಣ ಶೆಟ್ಟಿ, ಯೋಗೀಶ್ ರಾವ್ ಏಳಿಂಜೆ, ಸುಧಾಕರ ಉಪಸ್ಥಿತರಿದ್ದರು.
ಕ್ಷೇತ್ರದ ಧರ್ಮದರ್ಶಿ ಮೋಹನ್‌ದಾಸ್ ಸುರತ್ಕಲ್ ಸ್ವಾಗತಿಸಿ ಪ್ರಸ್ತಾವನೆಗೈದರು. ಪತ್ರಕರ್ತ ಶರತ್ ಶೆಟ್ಟಿ ಸಂಕಲಕರಿಯ ಕಾರ್ಯಕ್ರಮ ನಿರ್ವಹಿಸಿದರು.

Kinnigoli-24101504

Comments

comments

Comments are closed.

Read previous post:
Kinnigoli-24101503
ಯೋಗ ಪ್ರಕೃತಿ ಚಿಕಿತ್ಸಾ ಶಿಬಿರ

ಕಿನ್ನಿಗೋಳಿ: ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮೂಡಬಿದ್ರೆ ಹಾಗೂ ಸರಕಾರಿ ಆರ್ಯುವೇದ ಆಸ್ಪತ್ರೆ ಮತ್ತುಹಳೆವಿದ್ಯಾರ್ಥಿ ಸಂಘ ಕೊಲ್ಲೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ 5...

Close