ಕಟೀಲು ಕನ್ನಡಕ ವಿತರಣೆ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಂಗವಾಗಿ ಎಂ.ಸಿ.ಎಫ್. ವತಿಯಿಂದ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರದಲ್ಲಿ ಆಯ್ಕೆಯಾದ 280 ಮಂದಿಗೆ ಕನ್ನಡಕ ವಿತರಣೆ ಕಾರ್ಯಕ್ರಮ ಭಾನುವಾರ ಕಟೀಲು ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು. ಈ ಸಂದರ್ಭ ಕಟೀಲು ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ , ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲು, ಕಟೀಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಿರಣ್ ಶೆಟ್ಟಿ, ಅರಸು ಕುಂಜರಾಯ ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ , ತಾರಾನಾಥ ಶೆಟ್ಟಿ ಕೊಂಡೇಲ, ಮಾಜಿ ತಾ. ಪಂ. ಸದಸ್ಯ ತಿಮ್ಮಪ್ಪ ಕೋಟ್ಯಾನ್, ಉದ್ಯಮಿ ನೀಲಯ್ಯ ಕೋಟ್ಯಾನ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವೆಂಕಟರಮಣ ಹೆಗಡೆ , ಮುಖ್ಯ ಶಿಕ್ಷಕ ಗೋಪಾಲ ಶೆಟ್ಟಿ, ಸಹಶಿಕ್ಷಕಿ ತಾ ಮತ್ತಿತರರು ಉಪಸ್ಥಿತರಿದ್ದರು.

Kinnigoli-26101517

Comments

comments

Comments are closed.

Read previous post:
Kinnigoli-26101516
ರಾಮ ಮಂದಿರ ನವರಾತ್ರಿ ಮಹೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ರಾಮ ಮಂದಿರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಶುಕ್ರವಾರ ಸಾಮೂಹಿಕ ದೀಪ ನಮಸ್ಕಾರ ವಿಶೇಷ ಪೂಜೆ, ಭಜನೆ ಕಾರ್ಯಕ್ರಮ ನಡೆಯಿತು.

Close