ಮುಲ್ಕಿ ಬಿ ಹೋಬಳಿ ಮಟ್ಟದ ಕ್ರೀಡಾಕೂಟ

ಕಿನ್ನಿಗೋಳಿ: ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಶಾರೀರಿಕ ಶಿಕ್ಷಣದ ಆಗತ್ಯವಿದೆ. ಕ್ರೀಡಾ ಮನೋಭಾವ, ಮೌಲ್ಯಗಳನ್ನು ರೂಡಿಸಿಕೊಂಡು ಸೋಲು-ಗೆಲವನ್ನು ಸಮನಾಗಿ ಸ್ವೀಕರಿಸಬೇಕು. ಎಂದು ಕಿನ್ನಿಗೋಳಿ ಸೈಂಟ್ ಮೇರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ. ವಿನ್ಸೆಂಟ್ ಪ್ರಾನ್ಸಿಸ್ ಮೊಂತೆರೂ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ಉತ್ತರ ವಲಯ ಮತ್ತು ಸೈಂಟ್‌ಮೇರೀಸ್ ಸೆಂಟ್ರಲ್ ಸ್ಕೂಲ್ ಕಿನ್ನಿಗೋಳಿ ಇದರ ಜಂಟೀ ಆಶ್ರಯದಲ್ಲಿ ಶುಕ್ರವಾರ ಪೊಂಪೈ ಪದವಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಮುಲ್ಕಿ ಬಿ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ 2015-16 ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್ ಧ್ವಜಾರೋಹಣಗೈದರು. ಪೊಂಪೈ ಶಿಕ್ಷಣ ಸಮೂಹ ಸಂಸ್ಥೆಗಳ ಸಂಚಾಲಕ ಫಾ. ವಿಕ್ಟರ್ ಡಿಮೆಲ್ಲೋ ಆಶೀರ್ವಚನಗೈದರು.
ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಪಂಚಾಯಿತಿ ಸದಸ್ಯೆ ಮೀನಾಕ್ಷಿ, ಪೊಂಪೈ ಪದವಿ ಕಾಲೇಜು ಪ್ರಿನ್ಸಿಪಾಲ್ ಡಾ. ಜೋನ್ ಕ್ಲಾರೆನ್ಸ್ ಮಿರಾಂದ, ಮಂಗಳೂರು ಉತ್ತರ ವಲಯ ದೈಹಿಕ ಶಿಕ್ಷಣ ಪರೀವಿಕ್ಷಕ ರಘುನಾಥ್, ಪದ್ಮನೂರು ಕ್ಲಸ್ಟರ್ ಸಿಆರ್‌ಪಿ. ಜಗದೀಶ್ ನಾವಡ, ಸೈಂಟ್ ಮೇರೀಸ್ ಸೆಂಟ್ರಲ್ ಸ್ಕೂಲ್ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವಿನ್ಸೆಂಟ್ ಡಿಕೋಸ್ತಾ ಉಪಸ್ಥಿತರಿದ್ದರು.
ಕಿನ್ನಿಗೋಳಿ ಸೈಂಟ್‌ಮೇರೀಸ್ ಸೆಂಟ್ರಲ್ ಸ್ಕೂಲ್ ಪ್ರಿನ್ಸಿಪಾಲ್ ಫಾ. ಸುನಿಲ್ ಡಿಸೋಜ ಸ್ವಾಗತಿಸಿದರು. ನವೀನ್ ಡಿಸೋಜ ವಂದಿಸಿದರು. ಡೀನಾ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

Kinnigoli-30111502

Comments

comments

Comments are closed.

Read previous post:
Kinnigoli-30111501
ಸಾಂದ್ರ ಶೀತಲೀಕರಣ ಘಟಕ ಉದ್ಘಾಟನೆ

ಕಿನ್ನಿಗೋಳಿ: ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಲನ್ನು ಒದಗಿಸುವಲ್ಲಿ ಹೈನುಗಾರರು ಉತ್ತಮ ಸ್ಪಂದನೆ ನೀಡುತ್ತದ್ದಾರೆ ಹಾಲು ಹಾಳಾಗದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಾಂದ್ರ ಶೀತಲೀಕರಣ ಘಟಕನ್ನು ಸ್ಥಾಪಿಸಲಾಗಿದೆ ಎಂದು ದ.ಕ. ಹಾಲು...

Close