ಕಿನ್ನಿಗೋಳಿ : ಉಚಿತ ನೇತ್ರ ಚಿಕಿತ್ಸಾ ಶಿಬಿರ

ಕಿನ್ನಿಗೋಳಿ: ಕಣ್ಣಿನ ಸಂರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು, ದೃಷ್ಟಿ ದೋಷದ ನಿವಾರಣೆಗೆ ಮುಂಜಾಗ್ರತೆ ವಹಿಸಿ ಕಾಲ ಕಾಲಕ್ಕೆ ತಪಾಸಣೆ ನಡೆಸಬೇಕು. ಎಂದು ಕಿನ್ನಿಗೋಳಿ ಚರ್ಚ್ ಧರ್ಮಗುರು ವಿನ್ಸೆಂಟ್ ಪ್ರಾನ್ಸಿಸ್ ಮೋತೇರೋ ಹೇಳಿದರು.
ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯ ಸಂಚಾರಿ ನೇತ್ರ ಘಟಕ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಹಾಗೂ ಮುಚ್ಚೂರು-ನೀರುಡೆ ಲಯನ್ಸ್ ಕ್ಲಬ್ ಜಂಟಿ ಯಾಗಿ ಆಶ್ರಯದಲ್ಲಿ ಕಿನ್ನಿಗೋಳಿ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಶಾಲಾ ಸಭಾಂಗಣದಲ್ಲಿ ಭಾನುವಾರ ನಡೆದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆ ಅಧ್ಯಕ್ಷ ನಿಡ್ಡೋಡಿ ಚಾವಡಿ ಮನೆ ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೇವಾ ಸಂಸ್ಥೆಗಳು ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಭಾಗದ ಜನರಿಗಾಗಿ ಗ್ರಾಮೀಣ ಪರಿಸರದಲ್ಲಿ ನಡೆಸಿ ಆರೋಗ್ಯದ ಬಗ್ಗೆ ಜನರು ಕಾಳಜಿಯಿಂದಿರಲು ಸಹಕಾರ ನೀಡಬೇಕು ಎಂದರು.
ಶಿಬಿರದಲ್ಲಿ ಒಟ್ಟು 377 ಮಂದಿ ಚಿಕಿತ್ಸೆ ಪಡೆದರು, 248 ಕನ್ನಡಕವನ್ನು ವಿತರಿಸಲಾಯಿತು, 29 ಜನರು ಶಸ್ತ್ರಚಿಕಿತ್ಸೆಗೆ ನೊಂದಾವಣಿಗೊಂಡರು.
ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ ಕಟೀಲು, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಕುಲಾಲ್, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ನೇತ್ರ ಘಟಕದ ಡಾ. ಅನಿತಾ, ಡಾ. ಅಮೃತಾ, ಮುಚ್ಚೂರು-ನೀರುಡೆ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಅಶೋಕ್ ನಾಯಕ್, ಭಾಸ್ಕರ ದೇವಸ್ಯ, ಸರಿತಾ ಆದಿತ್ಯ, ಸೇವಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸೀತಾರಾಮ ಶೆಟ್ಟಿ ಎಳತ್ತೂರು ಹಾಜರಿದ್ದರು.
ಶರತ್ ಶೆಟ್ಟಿ ನಿರೂಪಿಸಿದರು, ನರಸಿಂಹ ಮಡಿವಾಳ ವಂದಿಸಿದರು.

Kinnigoli-06121502

Comments

comments

Comments are closed.

Read previous post:
Kinnigoli-06121501
ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ

ಕಿನ್ನಿಗೋಳಿ: ಕಿನ್ನಿಗೋಳಿ ಬಸ್ಸು ಚಾಲಕರ ಹಾಗೂ ನಿರ್ವಾಹಕರ ಸಂಘದ 2 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ ಶನಿವಾರ ಕಿನ್ನಿಗೋಳಿ ರಾಜರತ್ನಪುರ...

Close