ಕಟೀಲು ಫ್ರೌಡ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಮಕ್ಕಳಲ್ಲಿ ಎಳವೆಯಲ್ಲಿಯೇ ಅವರ ಆಸಕ್ತಿಗೆ ತಕ್ಕಂತೆ ಶಿಕ್ಷಣ ನೀಡಿದಾಗ ಭವಿಷ್ಯದಲ್ಲಿ ಉತ್ತಮ ಸಾಧನೆಗೈಯುತ್ತಾರೆ ಎಂದು ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಫ್ರೌಡ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದರು.
ಈ ಸಂದರ್ಭ ಫ್ರೌಡ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ.ವಿ. ಶೆಟ್ಟಿ ದಂಪತಿಗಳು ಹಾಗೂ ನಿವೃತ್ತ ಶಿಕ್ಷಕ ಉಮೇಶ್ ರಾವ್ ಎಕ್ಕಾರು ಅವರನ್ನು ಗೌರವಿಸಲಾಯಿತು. ಜಿಲ್ಲಾ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕಟೀಲು ಫ್ರೌಡಶಾಲಾ ವಿದ್ಯಾರ್ಥಿಗಳಾದ ಕೃತಿಕಾ, ಅನನ್ಯ, ಮಾನಸ, ಶ್ರೀವಲ್ಲಿ ಮತ್ತು ಕಾವ್ಯ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಮನು ಕಶ್ಯಪ್ ಬರೆದ ಸಾಧಕರ ಸನ್ನಿದಿ ಕಥಾ ಸಂಕಲನವನ್ನು ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಬಿಡುಗಡೆಗೊಳಿಸಿದರು.
ಶಿಬರೂರು ಗೋಪಾಲಕೃಷ್ಣ ತಂತ್ರಿ, ನಿವೃತ್ತ ದೈಹಿಕ ಶಿಕ್ಷಕ ಸುಂದರ್, ಸ್ವರಾಜ್ ಶೆಟ್ಟಿ, ಕಟೀಲು ಫ್ರೌಡ ಶಾಲಾ ಮುಖ್ಯ ಶಿಕ್ಷಕ ಸೋಮಪ್ಪ ಅಲಂಗಾರು, ಸಾಯಿನಾಥ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಪಧಾಧಿಕಾರಿಗಳು ಉಪಸ್ಥಿತರಿದ್ದರು.

Kinnigoli-01011603

Comments

comments

Comments are closed.

Read previous post:
Kinnigoli-01011602
ನೆಲ್ಲಿಗುಡ್ಡೆ ಕ್ರಿಸ್‌ಮಸ್ ಸೌಹಾರ್ದ ಕೂಟ

ಕಿನ್ನಿಗೋಳಿ: ಐಕಳ ಸಮೀಪದ ನೆಲ್ಲಿಗುಡ್ಡೆ ಯಲ್ಲಿ ಕ್ರಿಸ್‌ಮಸ್ ಸೌಹಾರ್ದ ಕೂಟ ನಡೆಯಿತು. ಈ ಸಂದರ್ಭ ನರ್ಸು ಅವರನ್ನು ಗೌರವಿಸಲಾಯಿತು. ಕಿರಂ ಚರ್ಚ್ ಧರ್ಮಗುರು ಫಾ. ವಿಕ್ಟರ್ ಡಿಮೆಲ್ಲೊ, ಐಕಳ...

Close