ಕಿನ್ನಿಗೋಳಿಯಲ್ಲಿ ಶವ ಪತ್ತೆ

ಕಿನ್ನಿಗೋಳಿ: ಕಿನ್ನಿಗೋಳಿ ಬಸ್ಸು ನಿಲ್ದಾಣದ ಹೋಟೆಲೊಂದರ ಬಳಿ ವ್ಯಕ್ತಿಯೋರ್ವರು ಕುಳಿತಲ್ಲಿಯೇ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಕಿನ್ನಿಗೋಳಿ ಸಮೀಪದ ಎಳತ್ತೂರು ನೆಲಗುಡ್ಡೆ ಪಡ್ಲೆಕ್ಯಾರು ನಿವಾಸಿ ಸತೀಶ್ ಶೆಟ್ಟಿ(45) ಎಂದು ಗುರುತಿಸಲಾಗಿದೆ. ಸತೀಶ್ ಶೆಟ್ಟಿಯವರಿಗೆ ಅತೀವ ಕುಡಿತದ ಚಟವಿತ್ತು ಎನ್ನಲಾಗಿದೆ. ಗುರುವಾರ ರಾತ್ರಿ ಹೊಸವರ್ಷದ ಸಂಭ್ರಮಾಚರಣೆಯಲ್ಲಿ ವಿಪರೀತ ಮದ್ಯ ಸೇವಿಸಿ ಸಾವನಪ್ಪಿದ ಸಾದ್ಯತೆ ಇದೆ ಎನ್ನಲಾಗಿದೆ. ಮುಲ್ಕಿ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Kinnigoli-01011604

Comments

comments

Comments are closed.

Read previous post:
Kinnigoli-01011603
ಕಟೀಲು ಫ್ರೌಡ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ: ಮಕ್ಕಳಲ್ಲಿ ಎಳವೆಯಲ್ಲಿಯೇ ಅವರ ಆಸಕ್ತಿಗೆ ತಕ್ಕಂತೆ ಶಿಕ್ಷಣ ನೀಡಿದಾಗ ಭವಿಷ್ಯದಲ್ಲಿ ಉತ್ತಮ ಸಾಧನೆಗೈಯುತ್ತಾರೆ ಎಂದು ಕಟೀಲು ದೇವಳ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು. ಕಟೀಲು ಶ್ರೀ ದುರ್ಗಾಪರಮೇಶ್ವರೀ...

Close