ರಾಜೀವ ಗಾಂದಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ

ಕಿನ್ನಿಗೋಳಿ: ಸರಕಾರ ಜನರಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಯೋಜನೆ ಸದ್ವಿನಿಯೋಗ ಪಡಿಸಿಕೊಳ್ಳಬೇಕು. ಗ್ರಾಮ ಪಂಚಾಯಿತಿಗಳು ಜನರ ಸೇವಾ ಕೇಂದ್ರಗಳಾಗಬೇಕು ಎಂದು ಯುವಜನಾ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.
ಶನಿವಾರ ಐಕಳ ಗ್ರಾಮ ಪಂಚಾಯಿತಿ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಭಾರತ್ ನಿರ್ಮಾಣ್ ರಾಜೀವ್ ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಐಕಳ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿವಾಕರ ಚೌಟ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ, ತಾಲೂಕು ಪಂಚಾಯಿತಿ ಸದಸ್ಯ ನೆಲ್ಸನ್ ಲೋಬೊ, ಜಿಲ್ಲಾ ಪಂಚಾಯಿತಿ ಕಿರಿಯ ಅಭಿಯಂತರರು ಪ್ರಶಾಂತ್ ಆಳ್ವ, ಐಕಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಂದರಿ ಆರ್. ಸಾಲ್ಯಾನ್ , ಮತ್ತಿತರರು ಉಪಸ್ಥಿತರಿದ್ದರು.
ಐಕಳ ಗ್ರಾ. ಪಂ. ಸದಸ್ಯ ಯೋಗೀಶ್ ಕೋಟ್ಯಾನ್ ಸ್ವಾಗತಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ಜಿ. ಪ್ರಸ್ತಾವನೆಗೈದರು. ರಾಜೇಶ್ ಶೆಟ್ಟಿ ವಂದಿಸಿದರು. ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-02011609 Kinnigoli-020116010 Kinnigoli-020116011 Kinnigoli-020116012

Comments

comments

Comments are closed.

Read previous post:
Kinnigoli-02011608
ವಾರ್ಷಿಕ ಹಸ್ತಪ್ರತಿ ಲಲಿತ್ ಬಿಡುಗಡೆ

ಮೂಲ್ಕಿ: ಮೂಲ್ಕಿಯ ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರ ದೇವಸ್ಥಾನದ ಅನುವಂಶೀಕ ಮೊಕ್ತೇಸ್ತರರಾದ ಶ್ರೀ ದುಗ್ಗಣ ಸಾವಂತರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಸ್ಥೆಯ...

Close