ಕಿನ್ನಿಗೋಳಿ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹ – 2016

ಕಿನ್ನಿಗೋಳಿ: ಮಂಗಳೂರು ನಗರ ಸಂಚಾರ ಪೊಲೀಸ್ ಹಾಗೂ ಕಿನ್ನಿಗೋಳಿ ಬಸ್ಸು ಮಾಲಕರ ಸಂಘ, ಲಾರಿ ಮಾಲಕರ ಸಂಘ, ಬಸ್ಸು ಚಾಲಕ ನಿರ್ವಾಹಕರ ಸಂಘ, ಕಿನ್ನಿಗೋಳಿ ಟೆಂಪೋ ಚಾಲಕ ಮಾಲಕರ ಸಂಘ, ರಿಕ್ಷಾ ಚಾಲಕ ಮಾಲಕರ ಸಂಘದ ಆಶ್ರಯದಲ್ಲಿ 27 ನೇ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹ – 2016 ಕಾರ್ಯಕ್ರಮ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಶುಕ್ರವಾರ ನಡೆಯಿತು. ಸಂಚಾರ ಉತ್ತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಪುರುಷೋತ್ತಮ ಹಾಗೂ ಹೆಡ್‌ಕಾನ್ಸೇಟಬಲ್ ಹರಿಶೇಖರ್ ಮಾಹಿತಿ ನೀಡಿದರು. ಯುಗಪುರುಷದ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಿದ್ದರು. ಜಿ. ಪಂ. ಸದಸ್ಯ ಈಶ್ವರ್ ಕಟೀಲ್, ಮೆನ್ನಬೆಟ್ಟು ಗ್ರಾ. ಪಂ. ಅಧ್ಯಕ್ಷೆ ಸರೋಜಿನಿ ಗುಜರನ್, ಕಟೀಲು ಗ್ರಾ. ಪಂ. ಅಧ್ಯಕ್ಷೆ ಗೀತಾ ಪೂಜಾರ್ತಿ, ಲಾರಿ ಮಾಲಕರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ , ಬಸ್ಸು ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ, ಬಸ್ಸು ಚಾಲಕರ ನಿರ್ವಾಹಕರ ಸಂಘದ ಅಧ್ಯಕ್ಷ ಭಾಸ್ಕರ ಪೂಜಾರಿ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಉಮೇಶ್, ಟೆಂಪೋ ಚಾಲಕ ಮಾಲಕರ ಸಂಘದ ಶಂಕರ್, ನಾರಾಯಣ, ಇಲಾಖೆಯ ಸುರೇಶ್, ಲೋಹಿತ್, ಶೇಕಪ್ಪ ಉಪಸ್ಥಿತರಿದ್ದರು.

Kinnigoli-18011602

Comments

comments

Comments are closed.

Read previous post:
Kinnigoli-18011601
ತೋಕೂರು ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕಿನ್ನಿಗೋಳಿ: ಪಡುಪಣಂಬೂರು ಗ್ರಾಮ ಪಂಚಾಯಿತಿ 10 ನೇ ತೋಕೂರು ಗ್ರಾಮದ ತಾಳೆಗುರಿಯಲ್ಲಿ ಜಿಲ್ಲಾ ಪಂಚಾಯಿತಿಯ 5 ಲಕ್ಷರೂ ಅನುದಾನದ ನೂತನ ಕಾಂಕ್ರಿಟ್ ರಸ್ತೆಯನ್ನು ಜಿ. ಪಂ. ಸದಸ್ಯೆ...

Close