ನೀರಿನ ಸಂರಕ್ಷಣೆ ಭವಿಷ್ಯದ ದೃಷ್ಟಿಯಲ್ಲಿ ಅಗತ್ಯ

ಮೂಲ್ಕಿ: ಭವಿಷ್ಯದಲ್ಲಿ ನೀರಿಗಾಗಿ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣ ಆಗಲು ಹೆಚ್ಚು ಸಮಯ ಬೇಕಾಗಿಲ್ಲ, ಮಳೆಯ ಪ್ರಮಾಣ ಗಣನೀಯವಾಗಿ ಕುಂಠಿತಗೊಂಡಿರುವುದರಿಂದ ಅಂತರ್ಜನದ ಬಗ್ಗೆ ಮಾಹಿತಿ ಅಗತ್ಯವಾಗಿದೆ. ಹಿಂದೆ ಹಳ್ಳಗಳು ಒಣಗುತ್ತಿದ್ದವು, ನಂತರ ಬಾವಿಗಳೇ ಬರಿದಾಗುತ್ತಿದೆ ಮುಂದೆ ಕೊಳವೆ ಬಾವಿಗಳಿಗೂ ಅಪಾಯ ತಪ್ಪಿದ್ದಲ್ಲ ಎಂದು ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಲಕ್ಷ್ಮೀ ಹೇಳಿದರು.
ಅವರು ಮೂಲ್ಕಿ ಬಳಿಯ ಪಡುಪಣಂಬೂರು ನಾರಾಯಣ ಸನಿಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾದ ಅಂತರ್ಜಲ ನಿರ್ದೇಶನಾಲಯದ ಜಿಲ್ಲಾ ಘಟಕದ ಸಂಯೋಜನೆಯಲ್ಲಿ ನಡೆದ ಅಂತರ್ಜಲ ಜನಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮೈಕೆಲ್ ಡಿಸೋಜ ಅಧ್ಯಕ್ಷತೆಯನ್ನು ವಹಿಸಿದ್ದರು.
ಅತಂರ್ಜಲ ಸದ್ಭಳಕೆ, ಅತಿ ಬಳಕೆಯ ನಿಯಂತ್ರಣ ಹಾಗೂ ಅಂತರ್ಜಲ ಅಭಿವೃದ್ಧಿ ಪಡಿಸುವ ಹಾಗೂ ತೆರೆದ ಕೊಳವೆ ಬಾವಿಗಳ ಬಗ್ಗೆ ಜಾಗೃತಿಯ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಉಪನಿರ್ದೇಶಕ ಡಾ.ಬಿ.ಎಂ.ರವೀಂದ್ರ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ಗಿರಿಜವ್ವ ಮೆಣಸಿನಕಾಯಿ, ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಭಾರ ಉಪನಿರ್ದೇಶಕ ನಾಗೇಂದ್ರಪ್ಪ, ಉಡುಪಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಂತರ್ಜಲ ಮತ್ತು ಖನಿಜ ಸಂಯೋಜಿತದ ಹಿರಿಯ ಭೂ ವಿಜ್ಞಾನಿ ಕೋದಂಡ ರಾಮಯ್ಯ, ಸಹಾಯಕ ಭೂ ವಿಜ್ಞಾನಿ ಮೂರ್ತಿ ಹಾಜರಿದ್ದರು.
ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಮೃತ್ಯುಂಜಯ್ಯ ಸ್ವಾಗತಿಸಿದರು, ಶಾಲಾ ಸಹ ಶಿಕ್ಷಕಿ ಪ್ರಭಾ ವಂದಿಸಿದರು. ಸಹ ಶಿಕ್ಷಕಿಯರಾದ ಶ್ರೀಲತಾ ಮತ್ತು ಸುಜಾತಾ ಕಾರ್ಯಕ್ರಮ ನಿರೂಪಿಸಿದರು.

Mulki-10021602

Comments

comments

Comments are closed.

Read previous post:
Mulki-10021601
ಧಾರ್ಮಿಕ ಸಭಾ ಕಾರ್ಯಕ್ರಮ

ಮೂಲ್ಕಿ: ಸಮಾಜ ಸಾಮರಸ್ಯ ಹಾಗೂ ಅಭಿವೃದ್ಧಿಗಾಗಿ ನಾರಾಯಣ ಗುರುಗಳ ಸಂದೇಶವು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು ಎಲ್ಲರೂ ತಮ್ಮ ಜೀವನಕ್ರಮದಲ್ಲಿ ಈ ತತ್ವಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು...

Close