ಕಟೀಲು – ರಜತ ಮಹೋತ್ಸವ ಬೆಳ್ಳಿಬೆಳಕು

ಕಿನ್ನಿಗೋಳಿ : ಕಲಿತ ಸಂಸ್ಥೆ ಮತ್ತು ಗುರುಗಳನ್ನು ಯಾವತ್ತೂ ಮರೆಯಬಾರದು, ಗುಣ ಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ ಅಭಿವೃದ್ದಿಪರ ಸಮಾಜ ಕಟ್ಟಬೇಕು. ಎಂದು ದ.ಕ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಹೇಳಿದರು.
ಭಾನುವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ರಜತ ಮಹೋತ್ಸವ ಬೆಳ್ಳಿಬೆಳಕು ಸಮಾರಂಭದ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘ ದ ವತಿಯಿಂದ 10 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ರಜತಸೌಧ ರಂಗ ಮಂದಿರದ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.
ಕಟೀಲು ದೇವಳ ಅರ್ಚಕ ವೇದಮೂರ್ತಿ ಶ್ರೀಹರಿನಾರಾಯಣದಾಸ ಆಸ್ರಣ್ಣ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್, ಮಾಜಿ ಜಿ. ಪಂ. ಸದಸ್ಯ ಈಶ್ವರ ಕಟೀಲು, ಕಟೀಲು ಗ್ರಾ. ಪಂ. ಅಧ್ಯಕ್ಷೆ ಗೀತಾ ಪೂಜಾರಿ, ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಪ್ರಗತಿಪರ ಕೃಷಿಕ ಮುರ ಸದಾಶಿವ ಶೆಟ್ಟಿ ಎಕ್ಕಾರು, ಕಟೀಲು ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ, ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಕೇಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಪದ್ಮಲತಾ, ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ರಾಮಚಂದ್ರ ಬೈಕಂಪಾಡಿ, ಹಳೇ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರ ಡಾ. ಕೃಷ್ಣ ಕಾಂಚನ್, ನಿರ್ದೇಶಕರಾದ ಪ್ರೊ. ಬಿ. ಜಯರಾಮ ರೈ, ಪ್ರೊ. ಪರಮೇಶ್ವರ ಸಿ.ಎಚ್., ಗೌರವಾಧ್ಯಕ್ಷೆ ಜಯಶ್ರೀ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಕರ್ಕೇರ ಮಟ್ಟಿ , ನವನಂದ ಎಕ್ಕಾರು, ಸೂರಜ್ ಶೆಟ್ಟಿ ಬಜಪೆ, ಪ್ರಕಾಶ್ ಕುಕ್ಕಾನ್ ಎಕ್ಕಾರು ಉಪಸ್ಥಿತರಿದ್ದರು. ಈ ಸಂದರ್ಭ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಗಿಡಿಗೆರೆ ರಾಮಕ್ಕ ಸನ್ಮಾನ, ಶಿಕ್ಷಕರಿಗೆ ಗುರುವಂದನೆ,ಕಾರ್ಯಕ್ರಮ ನಡೆಯಿತು.
ಹಳೆ ವಿದ್ಯಾರ್ಥಿ ಸಂಘದ ಕಾರ್ಯಾಧ್ಯಕ್ಷ ಕಿರಣ್ ಪಕ್ಕಳ ಸ್ವಾಗತಿಸಿದರು. ರಾಜೇಂದ್ರ ಪ್ರಸಾದ್ ಎಕ್ಕಾರು ಹಾಗೂ ಶೇಖರ್ ಅಜಾರ್ ಕಾರ್ಯಕ್ರಮ ನಿರೂಪಿಸಿದರು.

Kinnigoli-08031602

Comments

comments

Comments are closed.

Read previous post:
Kinnigoli-08031601
ಕಟೀಲು ಪಂಚಾಯಿತಿ ಸನ್ಮಾನ

ಕಿನ್ನಿಗೋಳಿ: ಕಟೀಲು ಪಂಚಾಯಿತಿ ಸದಸ್ಯರ ವತಿಯಿಂದ ಕಟೀಲು ಜಿಲ್ಲಾ ಪಂಚಾಯಿತಿ ಸದಸ್ಯೆ ಕಸ್ತೂರಿ ಪಂಜ, ಮೆನ್ನಬೆಟ್ಟು ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ, ಕಲ್ಲಮುಂಡ್ಕೂರು ತಾಲೂಕು ಪಂಚಾಯಿತಿ...

Close