ಕಟೀಲು ಆರು ಮೇಳದ 35 ಕಲಾವಿದರಿಗೆ ಸಮ್ಮಾನ

 ಕಿನ್ನಿಗೋಳಿ: ಯಕ್ಷಗಾನ ಕಲಾವಿದರನ್ನು ಗುರುತಿಸಿ ಪುರಸ್ಕೃರಿಸಿದಾಗ ಕಲೆಯ ಬೆಳವಣಿಗೆಯಲ್ಲಿ ಸಹಕಾರಿಯಾಗುತ್ತದೆ. ಎಂದು ಮೀನುಗಾರಿಕಾ ಹಾಗೂ ಯುವಜನ ಕ್ರೀಡಾ ಸಚಿವ ಅಭಯಚಂದ್ರ ಜೈನ್ ಹೇಳಿದರು.
ಕಟೀಲು ದಿ. ಗೋಪಾಲಕೃಷ್ಣ ಆಸ್ರಣ್ಣ ರ 25 ವರ್ಷದ ಸಂಸ್ಮರಣೆ ಕಾರ್ಯಕ್ರಮದ ಅಂಗವಾಗಿ ಕಟೀಲು ದೇವಳ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಅವರ ಮನೆಯಲ್ಲಿ ಸೋಮವಾರ ನಡೆದ ಕಟೀಲು ಮೇಳದ ಯಕ್ಷಗಾನ ಬಯಲಾಟದ ಸಂದರ್ಭ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭ ಕಟೀಲಿನ ಯಕ್ಷಗಾನದ ಆರು ಮೇಳಗಳಲ್ಲಿ 25 ವರ್ಷ ಕ್ಕೂ ಮಿಕ್ಕಿ ಸೇವೆ ಸಲ್ಲಿಸಿದ 35 ಕಲಾವಿದರು ಹಾಗೂ ಅರ್ಚಕರನ್ನು ಸನ್ಮಾನಿಸಲಾಯಿತು . ಮಂಗಳೂರು ಎ. ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎ. ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕಸಾಪದ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ, ಮೂಡಬಿದಿರೆ ಉದ್ಯಮಿ ಶ್ರೀಪತಿ ಭಟ್, , ಡಾ| ಮಾಧವ ರಾವ್, ಶರತ್ ಕುಮಾರ್, ಉದ್ಯಮಿ ಸುಂದರ ಶೆಟ್ಟಿ, ಪಿ. ಸತೀಶ್ ರಾವ್, ದೇವಪ್ರಸಾದ್ ಪುನರೂರು, ಗೋಪಾಲಕೃಷ್ಣ ಆಸ್ರಣ್ಣ , ಸುಧಾಕರ ರಾವ್ ಪೇಜಾವರ ಮತ್ತಿತರರು ಉಪಸ್ಥಿತರಿದ್ದರು. ಸಂಘಟಕ ಲಕ್ಷ್ಮೀನಾರಾಯಣ ಆಸ್ರಣ್ಣ ಪ್ರಸ್ತಾವನೆಗೈದು ಸ್ವಾಗತಿಸಿದರು. ರಶ್ಮಿ ಆಸ್ರಣ್ಣ ಕಾರ್ಯಕ್ರಮ ನಿರೂಪಿಸಿದರು. ನಿತೇಶ್ ಕುಮಾರ್ ಸನ್ಮಾನಿತರ ವಿವರ ನೀಡಿದರು.

Kateel--05031606

Comments

comments

Comments are closed.

Read previous post:
Mulkli-05031605
ಮೂಲ್ಕಿ: ಶಿಕ್ಷಣಕ್ಕೆ ಹಾಗೂ ಕ್ರೀಡೆಗೆ ಆದ್ಯತೆ

ಮೂಲ್ಕಿ: ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವಂತರಾಗಿ ಶಿಕ್ಷಣಕ್ಕೆ ಹಾಗೂ ಕ್ರೀಡೆಗೆ ಆದ್ಯತೆ ನೀಡುವ ಮೂಲಕ ಶೈಕ್ಷಣಿಕ ಉನ್ನತಿಗಳಿಸಿಕೊಳ್ಳಬೇಕು ಎಂದು ಹಿರಿಯ ಸಂಘಟಕ ಕೈಗಾರಿಕೋದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು....

Close