ಶ್ರೀ ರಾಮ ಯುವಕ ವೃಂದ ವಾರ್ಷಿಕೋತ್ಸವ

ಕಿನ್ನಿಗೋಳಿ: ಯುವ ಸಂಘಟನೆಗಳು ಜನಪರ ಕಾರ್ಯಗಳನ್ನು ಹಮ್ಮಿಕೊಂಡು ಗ್ರಾಮ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಯುವಜನಾ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.
ಗುರುವಾರ ಕಿನ್ನಿಗೋಳಿ ಗೋಳಿಜೋರ ಶ್ರೀ ರಾಮ ಯುವಕ ವೃಂದದ 30 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭ ರಾಜ್ಯ ಪ್ರಶಸ್ತಿ ವಿಜೇತೆ ಜಾನಪದ ಕಲಾವಿದೆ ಗಿಡಿಗೆರೆ ರಾಮಕ್ಕ ಅವರನ್ನು ಸನ್ಮಾನಿಸಲಾಯಿತು.
ಕಟೀಲು ಪದವಿ ಕಾಲೇಜು ಪ್ರಿನ್ಸಿಪಾಲ್ ಎಂ. ಬಾಲಕೃಷ್ಣ ಶೆಟ್ಟಿ, ತಾ. ಪಂ. ಸದಸ್ಯ ದಿವಾಕರ ಕರ್ಕೇರಾ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಪ್ರಕಾಶ್ ಹೆಗ್ಡೆ ಎಳತ್ತೂರು, ಸುಧಾಕರ ಶೆಟ್ಟಿ, ಗೋಳಿಜೋರ ಶ್ರೀ ರಾಮ ಯುವಕ ವೃಂದದ ಅಧ್ಯಕ್ಷ ಚಂದ್ರಶೇಖರ್, ಪ್ರಕಾಶ್ ಆಚಾರ್, ಮನೋಜ್ ಕುಮಾರ್ ಉಪಸ್ಥಿತರಿದ್ದರು. Kinnigoli--06051603

Comments

comments

Comments are closed.

Read previous post:
Kinnigoli--06051602
ಚಾಮುಂಡೇಶ್ವರಿ- ಗುಡಿ ಶಿಲಾನ್ಯಾಸ

ಕಿನ್ನಿಗೋಳಿ: ಉಲ್ಲಂಜೆ ಕೊರಗಜ್ಜ ಮಂತ್ರದೇವತಾ ಸನ್ನಿಧಿಯ ಚಾಮುಂಡೇಶ್ವರಿ, ಗುಳಿಗ ದೈವದ ಗುಡಿಯ ಶಿಲಾನ್ಯಾಸ ನಡೆಯಿತು. ಕೊಡೆತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ ಧಾರ್ಮಿಕ ವಿಧಿ ವಿಧಾನ ನಡೆಸಿದರು. ಕ್ಷೇತ್ರದ...

Close