ಉದ್ಯೋಗ ಮಾಹಿತಿ ಘಟಕ

ಮೂಲ್ಕಿ: ಗ್ರಾಮೀಣ ಆರ್ಥಿಕ ಹಿನ್ನಡೆಯುಳ್ಳ ಪ್ರದೇಶದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಹಾಗೂ ವ್ಯಕ್ತಿತ್ವ ವಿಕಸನ ಗೊಳಿಸಿ ಉದ್ಯೋಗಶೀಲರನ್ನಾಗಿಸಲು ಟಿಸಿಎಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಮಣಿಪಾಲ ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಸಹ ಪ್ರಾದ್ಯಾಪಕ ಪ್ರೊ.ವಿಕ್ರಮ್ ಬಾಳಿಗ ಹೇಳಿದರು. ಮಣಿಪಾಲ ವಿಶ್ವ ವಿದ್ಯಾನಿಲಯ ಮತ್ತು ವಿಜಯಾ ಕಾಲೇಜು ಉದ್ಯೋಗ ಮಾಹಿತಿ ಘಟಕದ ಸಹಯೋಗದಲ್ಲಿ ಮೂಲ್ಕಿ ವಿಜಯಾ ಕಾಲೇಜಿನಲ್ಲಿ ನಡೆದ 10 ದಿನಗಳ ಕಾಲ ನಡೆಯಲಿರುವ 80 ಗಂಟೆಗಳ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅರ್ಹತೆ ಮತ್ತು ಯೋಗ್ಯತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಅಸಮರ್ಥರಾಗಿ ಉದ್ಯೋಗ ಗಳಿಕೆಯಲ್ಲಿ ಹಿನ್ನಡೆ ಅನುಭವಿಸುತ್ತಿರುವುದರಿಂದ ವಿದ್ಯಾರ್ಥಿಗಳ ಉನ್ನತಿಗಾಗಿ ಈ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಂದರು.
ಕಾರ್ಯಕ್ರಮವನ್ನು ವಿಜಯಾ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷೆ ಶಮಿನಾ ಆಳ್ವಾ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲ ಪ್ರೊ.ಕೆ.ಆರ್.ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ವಿಶ್ವ ವಿದ್ಯಾನಿಲಯದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ಜೋಸ್ ಮೇಮನ್, ಪ್ರೊ.ವರಲಕ್ಷ್ಮಿ ಅಲಪಟ್ಟಿ, ವಿಜಯಾ ಕಾಲೇಜು ರಸಾಯನ ಶಾಸ್ತ್ರ ವಿಭಾಗದ ಪ್ರೊ.ನಾರಾಯಣ ಪೂಜಾರಿ ಅತಿಥಿಗಳಾಗಿದ್ದರು. ಕಾಲೇಜು ಕಂಪ್ಯೂಟರ್ ವಿಭಾಗದ ಅದ್ಯಾಪಕಿ ಶ್ರೀಲಕ್ಷ್ಮಿ.ವಿ.ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

Mulki--16061605

Comments

comments

Comments are closed.

Read previous post:
Mulki--16061604
ಯುವವಾಹಿನಿ ಪದಗ್ರಹಣ

ಮೂಲ್ಕಿ: ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಹಾಗೂ ಅಭಿವೃದ್ದಿಯನ್ನು ತರಲು ಸಾದ್ಯವಿದ್ದು ಯುವವಾಹಿನಿ ಸಂಸ್ಥೆಯು ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆಯೆಂದು ಯುವವಾಹಿನಿಯ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್...

Close