ಯುವವಾಹಿನಿ ಪದಗ್ರಹಣ

ಮೂಲ್ಕಿ: ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಹಾಗೂ ಅಭಿವೃದ್ದಿಯನ್ನು ತರಲು ಸಾದ್ಯವಿದ್ದು ಯುವವಾಹಿನಿ ಸಂಸ್ಥೆಯು ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆಯೆಂದು ಯುವವಾಹಿನಿಯ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ಹೇಳಿದರು.
ಮೂಲ್ಕಿಯ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಜರಗಿದ ಯುವವಾಹಿನಿಯ ಮೂಲ್ಕಿ ಘಟಕದ 2016-17 ರ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ನೂತನ ಅಧ್ಯಕ್ಷ ಚೇತನ್ ಕುಮಾರ್ ಮತ್ತವರ ತಂಡದ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು.ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮತ್ತು ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಹರಿಶ್ಚಂದ್ರ ಪಿ ಸಾಲ್ಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ನಿಕಟಪೂರ್ವಾಧ್ಯಕ್ಷ ಸತೀಶ್ ಕುಮಾರ್ ಸ್ವಾಗತಿಸಿದರು,ನೂತನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು,ವಿಜಯ ಕುಮಾರ್ ಕುಬೆವೂರು ಮತ್ತು ನರೇಂದ್ರ ಕೆರೆಕಾಡು ನಿರೂಪಿಸಿದರು.
Mulki--16061604

Comments

comments

Comments are closed.

Read previous post:
Mulki--16061603
ಮಳೆನೀರು ಕೊಯಿಲು, ಸಾವಯವ ಗೊಬ್ಬರ ಮಾಹಿತಿ

ಮೂಲ್ಕಿ : ಉತ್ತಮ ಜೀವನ ನಿರ್ವಹಣೆ ಆರೋಗ್ಯಪೂರ್ಣ ಶಾಂತಿಯುತ ವಾಗಿ ಬಾಳಲು ಉತ್ತಮ ಪ್ರಕೃತಿ ಅಗತ್ಯ ಎಂದು ಸಿ.ಒ.ಡಿ.ಪಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಡೆನಿಸ್ ಡಿಸೋಜ ಹೇಳಿದರು....

Close