ಕಿನ್ನಿಗೋಳಿ ಬಾಪೂಜಿ ಸೇವಾ ಕೇಂದ್ರ ಉದ್ಘಾಟನೆ

ಕಿನ್ನಿಗೋಳಿ: ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಬುಧವಾರ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಯಲ್ಲಿ ಪಂಚಾಯಿತಿ 100 ಬಾಪೂಜಿ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.
ಬಾಪೂಜಿ ಕೇಂದ್ರದ ಬಗ್ಗೆ ಮಾತನಾಡಿ ರಾಜ್ಯ ಸರ್ಕಾರ ಗ್ರಾಮೀಣ ಜನರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಹೊಸ ಯೋಜನೆಯನ್ನು ಜಾರಿಗೆ ತಂದಿದೆ
ನಾನಾ ಇಲಾಖೆಗಳ ಸೇವೆಗಳನ್ನು ಒಂದೇ ಕಡೆಯಲ್ಲಿ ಒದಗಿಸಲು 43 ಸೇವೆಗಳನ್ನು ತ್ವರಿತವಾಗಿ ಬಾಪೂಜಿ ಸೇವಾ ಕೇಂದ್ರದಲ್ಲಿ ದೊರಕಲಿದೆ. ಬಾಪೂಜಿ ಸೇವಾ ಕೇಂದ್ರದಲ್ಲಿ ಪಹಣಿ ಪತ್ರಿಕೆಗಳು, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಹಿಂದುಳಿದ ವರ್ಗಗಳ ಪ್ರಮಾಣ, ಅನುಸೂಚಿತ ಜಾತಿ/ ಪಂಗಡಗಳ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆರ್.ಟಿಸಿ ಮುಂತಾದ ಹಲವು ಮೂಲ ಸೌಕರ್ಯ ಗ್ರಾ.ಪಂ. ಕಚೇರಿಯಲ್ಲಿಯೇ ನೀಡಲಾಗುವುದು. ರಾಷ್ಟ್ರದಲ್ಲೇ ಮೊದಲ ಬಾರಿಗೆ ಈ ಯೋಜನೆ ಜಾರಿಗೊಳಿಸಲಾಗಿದೆ. ಎಂದರು
ಕಿನ್ನಿಗೋಳಿ ಬಹುಗ್ರಾಮ ಯೋಜನೆ ೯೫% ಕಾರ್ಯಗತವಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ ಸಿಗುವುದು ಅಸಾಧ್ಯ. ಕಿನ್ನಿಗೋಳಿಯ ಬಹಳ ಸಮಯದ ಬೇಡಿಕೆಯಾದ ಪಟ್ಟಣ ಪಂಚಾಯಿತಿ ಆಗಬೇಕಾಗಿದೆ. ಕಿನ್ನಿಗೋಳಿ ಹಾಗೂ ಮೆನ್ನಬೆಟ್ಟು ಪಂಚಾಯಿತಿಗಳನ್ನು ಒಟ್ಟು ಸೇರಿಸಿ ಪಟ್ಟಣ ಪಂಚಾಯಿತಿ ಮಾಡಬೇಕಾಗಿದೆ. ವೇಗವಾಗಿ ಬೆಳೆಯುತ್ತಿರುವ ಕಿನ್ನಿಗೋಳಿಗೆ ಘನತ್ಯಾಜ್ಯ ಘಟಕ ಮತ್ತು ಸ್ಮಶಾನ ಆಗಬೇಕಾಗಿದೆ. ಆಗ ಕಿನ್ನಿಗೋಳಿಯ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದು ಹೇಳಿದರು.
ಈ ಸಂದರ್ಭ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಪಿಡಿಒ ಅರುಣ್ ಪ್ರದೀಪ್ ಡಿಸೋಜ, ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರ ಹಾಗೂ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Kinnigoli-27071604 Kinnigoli-270716045

Comments

comments

Comments are closed.

Read previous post:
Kinnigoli-27071603
ಮೆನ್ನಬೆಟ್ಟು ಹಾಲು ಉತ್ಪಾದಕರ ಸಭೆ

ಕಿನ್ನಿಗೋಳಿ: ಮೆನ್ನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಕಿನ್ನಿಗೋಳಿ ಇದರ ವಾರ್ಷಿಕ ಸಭೆ ಶನಿವಾರ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ವಾಣಿ ವೈ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ...

Close