ಪಠ್ಯೇತರ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ

ಕಿನ್ನಿಗೋಳಿ : ಕೇವಲ ಅಂಕ ಗಳಿಕೆಯ ಉದ್ದೇಶವಿಟ್ಟುಕೊಳ್ಳದೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.
ಶುಕ್ರವಾರ ಕಟೀಲು ದೇವಳ ಪದವಿ ಪೂರ್ವ ಕಾಲೇಜು ವಾರ್ಷಿಕ ಸಂಚಿಕೆ ಭ್ರಮರವಾಣಿ ಹಾಗೂ ಹಸ್ತಪ್ರತಿಗಳ ಬಿಡುಗಡೆಗೊಳಿಸಿ ಮಾತನಾಡಿದರು.
ಕಟೀಲು ದೇವಳ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಪಠ್ಯಪೂರಕ ಸಂಘಗಳನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಪ್ರಿನ್ಸಿಪಾಲ್ ಪ್ರೊ. ಜಯರಾಮ ಪೂಂಜಾ ಸ್ವಾಗತಿಸಿ ವಿವಿಧ ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಉಪನ್ಯಾಸಕ ಪುಂಡರೀಕ ಹಾಗೂ ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜು ವಿದ್ಯಾರ್ಥಿ ನಾಯಕ ಶ್ರೀವತ್ಸ ಉಪಾಧ್ಯಾಯ ವಂದಿಸಿದರು.

Kinnigoli-03081603

Comments

comments

Comments are closed.

Read previous post:
Kinnigoli-03081602
ಕಿನ್ನಿಗೋಳಿ: ಕೋಟಿ ವೃಕ್ಷ

ಕಿನ್ನಿಗೋಳಿ: ಕರ್ನಾಟಕ ಸರಕಾರದ ಕೋಟಿ ವೃಕ್ಷ ಅಭಿಯಾನದಡಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಸಸಿ...

Close