ನೈತಿಕ ಮೌಲ್ಯಗಳ ಬಗ್ಗೆ ಒತ್ತು ಕೊಡಬೇಕು

ಕಿನ್ನಿಗೋಳಿ: ನೈತಿಕ ಮೌಲ್ಯಗಳ ಬಗ್ಗೆ ಒತ್ತು ಕೊಟ್ಟು ಮಕ್ಕಳನ್ನು ತಿದ್ದಿ ತೀಡಿ , ಅವರ ಆಸಕ್ತಿಯ ಪಾಠಗಳಿಗೆ ಪ್ರೋತ್ಸಾಹ ನೀಡಿ ಪ್ರತಿಭಾವಂತರನ್ನಾಗಿ ರೂಪಿಸಬೇಕು ಎಂದು ಐಕಳ ಪೊಂಪೈ ಕಾಲೇಜು ಪ್ರಿನ್ಸಿಪಾಲ್ ಡಾ. ಜೋನ್ ಕ್ಲಾರೆನ್ಸ್ ಮಿರಾಂದ ಹೇಳಿದರು.

ಕಿನ್ನಿಗೋಳಿ ರೋಟರಿ ಆಂಗ್ಲ ಮಾದ್ಯಮ ಶಾಲೆಯಲ್ಲಿ ಶನಿವಾರ ನಡೆದ ಶಾಲಾ ಶಿಕ್ಷಕ ರಕ್ಷಕ ಸಂಘದ ಮಹಾಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಈ ಸಂದರ್ಭ 2015-16ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು
2016-17ನೇ ಸಾಲಿನ ಶಾಲಾ ಶಿಕ್ಷಕ ರಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ರಮಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಕಾರ್ಯದರ್ಶಿ ವಿಲಿಯಂ ಸಿಕ್ವೇರ, ಮುಖ್ಯ ಶಿಕ್ಷಕ ಗಿಲ್ಬರ್ಟ್ ಡಿಸೋಜ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಯೋಗೀಶ್ ಕೋಟ್ಯಾನ್ ಉಪಸ್ಥಿತರಿದ್ದರು
ಶಿಕ್ಷಕ ಎಲ್.ಎನ್ ಭಟ್ ಸ್ವಾಗತಿಸಿದರು. ನಯನ ವಂದಿಸಿದರು. ಸುನೀತಾ ಕಾರ್ಯಕ್ರಮ ನಿರೂಪಿಸಿದರು.

Kinnigoli-03081601

Comments

comments

Comments are closed.

Read previous post:
Kinnigoli-020816011
ಕಿನ್ನಿಗೋಳಿ : ಆಟಿ ಕಷಾಯ ವಿತರಣೆ

ಕಿನ್ನಿಗೋಳಿ : ಕಿನ್ನಿಗೊಳಿ ಸಜ್ಜನ ಬಂಧುಗಳು ವತಿಯಿಂದ ಆಟಿ ಅಮಾವ್ಯಾಸೆ ಪ್ರಯುಕ್ತ ಉಚಿತವಾಗಿ ಹಾಲೆ ಮರದ ತೊಗಟೆಯ ಕಷಾಯ ನೀಡುವ ಕಾರ್ಯಕ್ರಮ ಮಂಗಳವಾರ ಬೆಳಿಗ್ಗೆ 6 ರಿಂದ 7...

Close