ಮಂಗಳೂರು ಶಾಲಾ ಯೋಗಾಸನ ಸ್ಪರ್ಧೆ

ಕಿನ್ನಿಗೋಳಿ: ಮಕ್ಕಳ ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆ ಹಾಗೂ ಏಕಾಗ್ರತೆಗೆ ಯೋಗ ಬಹು ಮುಖ್ಯ. ಯೋಗದಿಂದ ಹಲವಾರು ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು ಮಂಗಳೂರು ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ ಮುಖ್ಯಸ್ಥೆ ಹಿಲ್ಡಾ ರಾಯಪ್ಪನ್ ಹೇಳಿದರು.
ಕಿನ್ನಿಗೋಳಿ ಲಿಟ್ಲ್ ಫ್ಲವರ್ ಪ್ರೌಢ ಶಾಲೆಯಲ್ಲಿ ಸೋಮವಾರ ನಡೆದ ಮಂಗಳೂರು ತಾ. ಮಟ್ಟದ ಪ್ರೌಢ ಶಾಲಾ ಯೋಗಾಸನ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಈ ಸಂದರ್ಭ ಶಾಲೆಯ ಹಳೇ ವಿದ್ಯಾರ್ಥಿ ರಾಷ್ಟ್ರ ಮಟ್ಟದ ಯೋಗಾಸನ ಪಟು ಪ್ರಣಿಕ್ ಅಮೀನ್ ಅವರನ್ನು ಸನ್ಮಾನಿಸಲಾಯಿತು.
ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ ಅಧ್ಯಕ್ಷತೆ ವಹಿಸಿದ್ದರು.
ಮೇರಿವೆಲ್ ಕಾನ್ವೆಂಟ್ ಮುಖ್ಯಸ್ಥೆ ಭಗಿನಿ ವಿತಾಲಿಸ್ ಬಿ.ಎಸ್., ಶಾಲಾ ಸಂಚಾಲಕಿ ಭಗಿನಿ ಡಿವಿನಾ ಬಿ.ಎಸ್., ಕಿನ್ನಿಗೋಳಿ ಲಿಟ್ಲ್ ಫ್ಲವರ್ ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅರುಣಾ ಬಿ.ಎಸ್., ಪ್ರಾಥಮಿಕ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸಿಂತಿಯಾ ಡಿಸೋಜಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಲೀರಾ ಮರಿಯ, ಪ್ರೌಢ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಮೇಶ ದೇವಾಡಿಗ, ದೈಹಿಕ ಶಿಕ್ಷಣ ನಿರ್ದೇಶಕ ರಘುನಾಥ್, ಶೇಖರ ಕಡ್ತಲ, ಜಯಶ್ರೀ ಬೊಕ್ಕಪಟ್ಟಣ, ಹರೀಶ್ಚಂದ್ರ, ಸಿ.ಆರ್.ಪಿ. ಜಗದೀಶ್ ನಾವಡ ಉಪಸ್ಥಿತರಿದ್ದರು.
ಶಿಕ್ಷಕ ಹಿಲರಿ ಮಸ್ಕರೇನ್ಹಸ್ ಕಾರ್ಯಕ್ರಮ ನಿರೂಪಿಸಿದರು.

Kinnigoli-04081602

Comments

comments

Comments are closed.

Read previous post:
Kinnigoli-04081601
ಗುತ್ತಕಾಡು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕಿನ್ನಿಗೋಳಿ: ಗುತ್ತಕಾಡು ದ.ಕ. ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಚ್ಚುವರಿ ಶಾಲಾ ಶಿಕ್ಷಕರ ವರ್ಗಾವಣೆ ವಿರುದ್ಧ ಮಂಗಳವಾರ ವಿದ್ಯಾರ್ಥಿಗಳು, ಹೆತ್ತವರು ಹಾಗೂ ಪೋಷಕರು ಶಾಲಾ ಆವರಣದಲ್ಲಿ ಪ್ರತಿಭಟನೆ...

Close