ಧಾರ್ಮಿಕ ಕ್ಷೇತ್ರಗಳಿಂದ ಸಮಾಜದ ಉನ್ನತಿ ಸಾಧ್ಯ

ಕಿನ್ನಿಗೋಳಿ: ತುಳುನಾಡಿನ ಸಂಸ್ಕೃತಿ-ಸಂಸ್ಕಾರ, ಆಚಾರ-ವಿಚಾರಗಳನ್ನು ಉಳಿಸಿ ಬೆಳೆಸುವಲ್ಲಿ ದೈವಸ್ಥಾನ, ದೇವಸ್ಥಾನಗಳು ಸಹಕಾರಿಯಾಗಿದ್ದು, ಇಂತಹ ಧಾರ್ಮಿಕ ಕ್ಷೇತ್ರಗಳಿಂದ ಸಮಾಜದ ಉನ್ನತಿ ಸಾಧ್ಯ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು. ಕಿನ್ನಿಗೋಳಿ ಸಮೀಪದ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಾಮ್ಮಾಯೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ನಡೆದ ದಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಂಗಳೂರು ಉದ್ಯಮಿ ಸುಧಾಕರ ಅಳ್ವ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭ ದೇವಳದ ಧರ್ಮದರ್ಶಿ ಮೋಹನದಾಸ ಸುರತ್ಕಲ್ ರಚಿತ, ಯುಗಪುರುಷ ಪ್ರಕಟನಾಲಯದಿಂದ ಪ್ರಕಟಿತ 522ನೇ ಕೃತಿ ಕನ್ನಡ ಪ್ರಶ್ನೋಪನಿಷತ್ ನ್ನು ಕಟೀಲು ದೇವಳ ಪ್ರಧಾನ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ಬಿಡುಗಡೆಗೊಳಿಸಿದರು.
ಸಾಧಕರಾದ ಕವಯತ್ರಿ ಮತ್ತು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಹಾಗೂ ನೃತ್ಯ ವಿದೂಷಿ ಅನ್ನಪೂರ್ಣ ಸಿ ಶೆಟ್ಟಿ ಬಳ್ಕುಂಜೆ ಅವರನ್ನು ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.
ಮುಂಬಾಯಿ ಉದ್ಯಮಿ ವಿರಾರ್ ಶಂಕರ್ ಶೆಟ್ಟಿ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಸುರತ್ಕಲ್ ಮಹಮ್ಮಾಯಿ ದೇವಳದ ಕಸ್ತೂರಿ ಶ್ರೀ ಅರುಣ ಪೈ, ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಪುರೋಹಿತ ದೇಂದಡ್ಕ ಸುಬ್ರಮಣ್ಯ ಭಟ್, ಮುಂಬಾಯಿ ಉದ್ಯಮಿ ಆರ್ ಪುರುಶೋತ್ತಮ ಪೂಜಾರಿ, ತಾಲೂಕು ಪಂಚಾಯಿತಿ ಸದಸ್ಯೆ ರಶ್ಮಿ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Kinnigoli-11101601

Comments

comments

Comments are closed.

Read previous post:
Kinnigoli-09101602
ಐಕಳ ಗುಡ್ಡೆಯಲ್ಲಿ ಅಸ್ಥಿಪಂಜರ ಪತ್ತೆ

ಕಿನ್ನಿಗೋಳಿ : ಮುಲ್ಕಿ ಠಾಣಾ ವ್ಯಾಪ್ತಿಯ ಐಕಳ ಗುಡ್ದ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಗಂಡಸಿನ ಅಸ್ಥಿ ಪಂಜರ ಪತ್ತೆಯಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಭಾನುವಾರ ಬೆಳಿಗ್ಗೆ...

Close