ಗೋವಿಂದದಾಸ್ ಪ.ಪೂ. ಕಾಲೇಜು ಎನ್.ಎಸ್.ಎಸ್ ವಾರ್ಷಿಕ ಶಿಬಿರ

ಕಿನ್ನಿಗೋಳಿ : ವಿದ್ಯಾರ್ಥಿಗಳು ಸಾಮಾಜಿಕ ಜಾಲ ತಾಣಗಳಿಂದ ದೂರವಿದ್ದು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು. ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಅರಿತು ಕಲಿತ ಶಾಲೆ ಮತ್ತು ಗುರುಗಳಿಗೆ ಗೌರವ ನೀಡಿದಾಗ ಭವಿಷ್ಯದಲ್ಲಿ ದೇಶದ ಉತ್ತಮ ಪ್ರಜೆಯಾಗಲು ಸಾಧ್ಯ ಎಂದು ಮುಂಬಯಿ ಉದ್ಯಮಿ ಪ್ರಕಾಶ್ ಶೆಟ್ಟಿ ನಲ್ಯಗುತ್ತು ಹೇಳಿದರು.
ಕೆಮ್ರಾಲ್ ಪಂಜ ಸರಕಾರಿ ಶಾಲೆಯಲ್ಲಿ ಭಾನುವಾರ ನಡೆದ ಸುರತ್ಕಲ್ ಗೋವಿಂದದಾಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಾಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ ವೆಂಕಟ್ರಾವ್ ಅಧ್ಯಕ್ಷತೆವಹಿಸಿದ್ದರು.
ಈ ಸಂದರ್ಭ ತಾ. ಪಂ. ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಪಿ. ವಿಜಯಾನಂದ ರಾವ್, ಕೆಮ್ರಾಲ್ ಪಂಜ ಸರಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಪದ್ಮನಾಭ ಪೂಜಾರಿ, ಶಾಲಾ ಮುಖ್ಯ ಶಿಕ್ಷಕಿ ಐರಿನ್ ಡಿಸೋಜ , ಸುರತ್ಕಲ್ ಗೋವಿಂದದಾಸ್ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಲಕ್ಷ್ಮೀ ಪಿ, ಎನ್‌ಎಸ್‌ಎಸ್ ಘಟಕದ ನಾಯಕಿ ಪ್ರಾರ್ಥನಾ ಎಂ. ರಾವ್, ನಾಯಕ ವೈಭವ್,ಯೋಜನೆಯ ಯೋಜನಾಧಿಕಾರಿ ವೆಂಕಟರಮಣ ಪೈ, ವಿದ್ಯಾರ್ಥಿ ಶ್ರುತಿ, ರೇಷ್ಮಾ, ಘಟಕದ ನಾಯಕ ವೈಭವ್ ಕೆ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪೂಜಾ, ಪ್ರತೀಕ್, ವಿಖ್ಯಾತ್ ಶೆಟ್ಟಿ ಶಿಬಿರದ ಬಗ್ಗೆ ಅನಿಸಿಕೆ ತಿಳಿಸಿದರು.

Kinnigoli-24101602

 

Comments

comments

Comments are closed.

Read previous post:
Kinnigoli-24101601
ಮುಲ್ಕಿ ಮೂಡಬಿದಿರೆ ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆ

ಕಿನ್ನಿಗೋಳಿ : ಹಲವಾರು ವರ್ಷಗಳಿಂದ ಕಾಂಗ್ರೆಸ್ ಸರಕಾರ ಕೇಂದ್ರದಲ್ಲಿ ಆಡಳಿತ ಮಾಡಿದ್ದರೂ ಯಾವುದೇ ಅಭಿವೃದ್ದಿ ಪರ ಬದಲಾವಣೆಗಳಾಗಲಿಲ್ಲ. ಆದರೆ ಕಳೆದ ೨ ವರ್ಷಗಳಲ್ಲಿ ವಿಶ್ವವೇ ಭಾರತದತ್ತ ನೋಡುವಂತೆ ಪರಿವರ್ತನೆ...

Close