ಸುರಗಿರಿ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ 2017 ರಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಯಿತು. ದೇವಳದ ಆಡಳಿತ ಮೊಕ್ತೇಸರ ಕೆ. ಸೀತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಕಲಶೋತ್ಸವದ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಪ್ರಧಾನ ಅರ್ಚಕ ವಿಶ್ವೇಶ ಭಟ್, ಮೊಕ್ತೇಸರರಾದ ಬಾಲಚಂದ್ರ ಭಟ್, ಅನಂತರಾಮ ಭಟ್, ಪ್ರಕಾಶ್ ಶೆಟ್ಟಿ, ಧನಂಜಯ ಶೆಟ್ಟಿಗಾರ್ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಅತ್ತೂರು ಹೊಸಲೊಟ್ಟು ಬಾಬು ಎನ್ ಶೆಟ್ಟಿ ಹಾಗೂ ಕಾರ್ಯಾಧ್ಯಕ್ಷರಾಗಿ ಅತ್ತೂರು ಬೈಲುಮನೆ ವೆಂಕಟರಾಜ ಉಡುಪ ಆಯ್ಕೆಯಾದರು.

Kinnigoli-24101603

 

Comments

comments

Comments are closed.

Read previous post:
Kinnigoli-24101602
ಗೋವಿಂದದಾಸ್ ಪ.ಪೂ. ಕಾಲೇಜು ಎನ್.ಎಸ್.ಎಸ್ ವಾರ್ಷಿಕ ಶಿಬಿರ

ಕಿನ್ನಿಗೋಳಿ : ವಿದ್ಯಾರ್ಥಿಗಳು ಸಾಮಾಜಿಕ ಜಾಲ ತಾಣಗಳಿಂದ ದೂರವಿದ್ದು ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕು. ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಅರಿತು ಕಲಿತ ಶಾಲೆ ಮತ್ತು ಗುರುಗಳಿಗೆ ಗೌರವ ನೀಡಿದಾಗ...

Close