ಕಿನ್ನಿಗೋಳಿ ಮಾರುಕಟ್ಟೆ ಸಿಸಿ ಕ್ಯಾಮಾರ ಅಳವಡಿಕೆ

ಕಿನ್ನಿಗೋಳಿ: ಮಹಿಳಾ ಮೀನು ಮಾರಾಟಗಾರರ ಸುರಕ್ಷತೆ ಮತ್ತು ಗ್ರಾಹಕರ ಹಿತಾಸಕ್ತಿ ದೃಷ್ಟಿಯಿಂದ ಅಲ್ಲದೆ ಮಾರುಕಟ್ಟೆ ಪ್ರಾಂಗಣ ಪರಿಸರದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಬಗ್ಗೆ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಮಾರುಕಟ್ಟೆ ಆವರಣದಲ್ಲಿ ಸಿ.ಸಿ. ಕ್ಯಾಮರ ಅಳವಡಿಸಲಾಗಿದೆ. ಎಂದು ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಮಂಗಳವಾರ ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಮೀನು ಮಾರುಕಟ್ಟೆಯಲ್ಲಿ 75,000 ರೂ ವೆಚ್ಚದಲ್ಲಿ ಅಳವಡಿಸಲಾದ ಆರು ಸಿ. ಸಿ. ಕ್ಯಾಮರಗಳನ್ನು ಉದ್ಘಾಟಿಸಿ ಮಾತನಾಡಿದರು.
ಜಿ.ಪಂ. ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾ. ಪಂ. ಸದಸ್ಯರಾದ ದಿವಾಕರ ಕರ್ಕೇರಾ, ಶರತ್ ಕುಮಾರ್ ಕುಬೆವೂರು, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಮಾಜಿ ಅಧ್ಯಕ್ಷ ದೇವಪ್ರಸಾದ್ ಪುನರೂರು, ಎಪಿಎಂಸಿ ಸದಸ್ಯ ಪ್ರಮೋದ್ ಕುಮಾರ್, ಮಾಜಿ ಜಿ. ಪಂ. ಉಪಾಧ್ಯಕ್ಷೆ ಶಾಲೆಟ್ ಪಿಂಟೋ, ಪಿಡಿಒ ಅರುಣ್‌ಪ್ರದೀಪ್ ಡಿಸೋಜ, ಕಿನ್ನಿಗೋಳಿ ಮಹಿಳಾ ಮೀನುಗಾರರ ಸಂಘದ ಅಧ್ಯಕ್ಷೆ ಗೀತಾ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Kinnigoli2510201601

Comments

comments

Comments are closed.

Read previous post:
ನವೆಂಬರ್ 2 ರಂದು ಕೃತಿ ಬಿಡುಗಡೆ

ಕಿನ್ನಿಗೋಳಿ: ಕಿನ್ನಿಗೋಳಿ ಯುಗಪುರುಷ ಪ್ರಕಟಣಾಲಯದಿಂದ ಪ್ರಕಟಿತ 521ನೇ ಕೃತಿ ರಮೇಶ್ ಶೆಟ್ಟಿಗಾರ್ ಮಂಜೇಶ್ವರ ರಚಿತ "ಅಪೂರ್ಣ ಸತ್ಯ ಹಾಗೂ ಇನ್ನಿತರ ಕಥೆಗಳು" ಕೃತಿಯನ್ನು ನವೆಂಬರ್ 2ರಂದು ಸಂಜೆ ಗಂಟೆ...

Close