ಡಾ. ಎಂ. ರಾಮಣ್ಣ ಶೆಟ್ಟಿ ಶಾಲಾ ವಾರ್ಷಿಕೋತ್ಸವ

ಕಿನ್ನಿಗೋಳಿ : ಮೌಲ್ಯಾಧರಿತ ಶಿಕ್ಷಣವನ್ನು ಮಕ್ಕಳಲ್ಲಿ ಮೂಡಿಸಿದಾಗ ಭವಿಷ್ಯದಲ್ಲಿ ಉತ್ತಮ ಜೀವನ ಹಾಗೂ ಭವ್ಯ ಸಮಾಜದ ನಿರ್ಮಾಣ ಸಾಧ್ಯ. ಮಕ್ಕಳ ಸಾಧನೆಗೆ ತಕ್ಕಂತೆ ಹಿರಿಯರು ಪ್ರೋತ್ಸಾಹ ನೀಡಬೇಕು ಎಂದು ನಿಟ್ಟೆ ಕೆ.ಎಸ್. ಹೆಗ್ಡೆ ವಿದ್ಯಾ ಸಂಸ್ಥೆಯ ನಿರ್ದೇಶಕ ಪ್ರೊ. ಕೆ. ಶಂಕರನ್ ಹೇಳಿದರು.
ನಿಟ್ಟೆ ವಿದ್ಯಾ ಸಂಸ್ಥೆಯ ಅಧೀನಕ್ಕೆ ಒಳ ಪಟ್ಟ ಸಂಸ್ಥೆಯಾದ ತಪೋವನ, ತೋಕೂರು ಡಾ. ಎಂ. ರಾಮಣ್ಣ ಶೆಟ್ಟಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶನಿವಾರ ನಡೆದ ಶಾಲಾ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಯಾದವ ದೇವಾಡಿಗ ಉಪಸ್ಥಿತರಿದ್ದರು.
ಶಾಲಾ ನಾಯಕಿ ನೇಹಾ ವೈ ದೇವಾಡಿಗ ಸ್ವಾಗತಿಸಿದರು, ಶಾಲಾ ಮುಖ್ಯ ಶಿಕ್ಷಕಿ ಶ್ರೀಲತಾ ರಾವ್ ವಾರ್ಷಿಕ ವರದಿ ವಾಚಿಸಿದರು, ಶಿಕ್ಷಕಿ ಪ್ರಿಯಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು, ಶಾಲಾ ನಾಯಕ ಮುರಳಿ ಮನೋಹರ ವಂದಿಸಿದರು, ರಫಾ ಸುಲ್ತಾನ್ ಕಾರ್ಯಕ್ರಮ ನಿರೂಪಿಸಿದರು.

Kinnigoli-03122016010

Comments

comments

Comments are closed.

Read previous post:
ರಿಕ್ಷಾ ಟ್ಯಾಕ್ಸಿ ಚಾಲಕ ಗೈಡ್‌-ಪ್ರವಾಸಿಗರಿಗೆ ಅನುಕೂಲ

ಮೂಲ್ಕಿ: ಸಂಪತ್ಭರಿತ ಅವಿಭಜಿತ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು, ಸ್ಥಳೀಯ ರಿಕ್ಷಾ ಟ್ಯಾಕ್ಸಿ ಚಾಲಕರು ಪ್ರವಾಸಿ ಗೈಡ್‌ಗಳಾಗಿ ಕಾರ್ಯನಿರ್ವಹಿಸಿದಲ್ಲಿ ತಾವೂ ಬೆಳೆಯುವುದರ ಜತೆಗೆ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು...

Close