ತೋಕೂರು ಸ್ಪೋಟ್ಸ್ ಕ್ಲಬ್ ವಾರ್ಷಿಕೋತ್ಸವ

ಕಿನ್ನಿಗೋಳಿ: ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋಟ್ಸ್ ಕ್ಲಬ್ (ರಿ) ನ ವಾರ್ಷಿಕೋತ್ಸವ ಮಂಗಳವಾರ ನಡೆಯಿತು.
ಈ ಸಂದರ್ಭ ನವನೀತ್ ಅವರ ವಿದ್ಯಾಭ್ಯಾಸಕ್ಕಾಗಿ ಧನಸಹಾಯ, ಸಾಕ್ಷಿ ಮೂಲ್ಯ ಹಾಗೂ ವಿಠಲ ರಾವ್ ಅವರ ವೈದ್ಯಕೀಯ ಚಿಕಿತ್ಸೆಗಾಗಿ ಧನ ಸಹಾಯ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮುಖ್ಯಪ್ರಾಣ ಕಿನ್ನಿಗೋಳಿ, ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಭಾಸ್ಕರ ಕುಲಾಲ್ ಬರ್ಕೆ ಕಂಬಳಬೆಟ್ಟು, ದ.ಕ. ಜಿಲ್ಲಾ ಪಂಚಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ಮೂಡಾ ಸದಸ್ಯ ವಸಂತ್ ಬರ್ನಾಡ್, ಪ್ರತಿಭಾವಂತ ವಿದ್ಯಾರ್ಥಿನಿ ಹರ್ಷಿತಾ ಅವರನ್ನು ಸನ್ಮಾನಿಸಲಾಯಿತು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ದಾಸ್, ಪುನರೂರು ವಿಪ್ರ ಸಂಘದ ಅಧ್ಯಕ್ಷ ಪುರುಷೋತ್ತಮ ರಾವ್, ವಿಜಯಕುಮಾರ್ ರೈ ಕಲ್ಲಾಪು, ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋಟ್ಸ್ ಕ್ಲಬ್ ಅಧ್ಯಕ್ಷ ರತನ್ ಶೆಟ್ಟಿ, ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಮತ್ತು ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.
ಪ್ರಶಾಂತ್ ಕುಮಾರ್ ಬೇಕಲ್ ಕಾರ್ಯಕ್ರಮ ನಿರೂಪಿಸಿದರು.

Kinnigoli-0712201601

Comments

comments

Comments are closed.

Read previous post:
Kinnigoli-0612201606
ಕಿನ್ನಿಗೋಳಿ ಲಿಟ್ಲ್ ಫ್ಲವರ್ ಶಾಲೆ ಅಮೃತ ಮಹೋತ್ಸವ

ಕಿನ್ನಿಗೋಳಿ: ಡಿ.9-10 ರಂದು ಕಿನ್ನಿಗೋಳಿ ಲಿಟ್ಲ್ ಫ್ಲವರ್ ಪ್ರೌಢ ಶಾಲಾ ಅಮೃತ ಮಹೋತ್ಸವ ವರ್ಷಾಚರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಲೀರಾ...

Close